ಹಾವೇರಿ:ಇಂದು ಹಾವೇರಿ ಬಿಜೆಪಿ ಕಚೇರಿಗೆ ಮಾಜಿ ಸಿಎಂ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದಂತೆ ಕಾರ್ಯಕರ್ತರ ನಡುವೆ ಗದ್ದಲ, ಗಲಾಟೆ ಭುಗಿಲೆದ್ದಿದ್ದು, ಕಾರ್ಯಕರ್ತರು ಹೈಡ್ರಾಮಾ ಸೃಷ್ಟಿಸಿದ್ದಾರೆ. ಇದರಿಂದ ತೀವ್ರ ಬೇಸರಗೊಂಡ ಬೊಮ್ಮಾಯಿ ಕಾರ್ಯಕ್ರಮ ಮೊಟಕುಗೊಳಿಸಿ, ಅಲ್ಲಿಂದ ಹೊರಟು ಹೋಗಿದ್ದಾರೆ.
ಇದನ್ನೂ ಓದಿ:ಯಾವುದೇ ಪದಾರ್ಥಗಳಿಗೂ ಮಾರಾಟ ದರಕ್ಕಿಂತ ಹೆಚ್ಚು ಹಣ ವಸೂಲು ಮಾಡುವಂತಿಲ್ಲ
ಹಾವೇರಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರರನ್ನು ಎಳದಾಡಿ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ‌ ಶಹರ ಹಾಗೂ ಗ್ರಾಮೀಣ ಭಾಗದ ಅಧ್ಯಕ್ಷರನ್ನು ಬದಲಿಸುವ ವಿಚಾರವಾಗಿ ಗಲಾಟೆ ಆರಂಭಗೊಂಡಿತು. ನಗರ ಕಾರ್ಯಕರ್ತರನ್ನು ಗ್ರಾಮೀಣ ಭಾಗದ ಅಧ್ಯಕ್ಷರಾಗಿ ಮಾಡಿದ್ದಕ್ಕೆ ಕಾರ್ಯಕರ್ತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಕೂಡಲೆ ಗ್ರಾಮೀಣ ಮತ್ತು ನಗರದ ಅಧ್ಯಕ್ಷರನ್ನು ಬದಲಾಯಿಸಿ, ಹೊಸಬರನ್ನು ನೇಮಕ ಮಾಡುವಂತೆ ಒತ್ತಾಯಿಸಿದ್ದಾರೆ. ಈ ಕುರಿತಂತೆ ಮಾಜಿ ಸಿಎಂ ಬೊಮ್ಮಾಯಿಗೆ ಕಾರ್ಯಕರ್ತರು ಮನವಿ ಮಾಡಿದರು. ಜಟಾಪಟಿಯ ಬೆನ್ನಲ್ಲೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ಇದನ್ನು ಸರಿ ಮಾಡುತ್ತೇನೆ, ನೀವೆಲ್ಲಾ ಒಗಟ್ಟು ಪ್ರದರ್ಶಿಸಿ. ಚುನಾವಣೆ ಹತ್ತಿರ ಇದೆ ಗಲಾಟೆ ಸರಿಯಲ್ಲ. ರಾಜ್ಯಾಧ್ಯಕ್ಷರಿಗೆ ಹೇಳಿ ಸರಿಪಡಿಸುವೆ ಎಂದು ಮನವಿ ಮಾಡಿದರು.
ಇದನ್ನೂ ಓದಿ:ರಾಜ್ಯ ಬಜೆಟ್‌ನಲ್ಲಿ ಯೋಜನೆ ಘೋಷಣೆ: ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಸಮಿತಿ ರಚನೆ
ಕಾರ್ಯಕರ್ತರಿಗೆ ಮನವಿ ಮಾಡಿದ ಕೂಡಲೇ ಕಾರ್ಯಕ್ರಮ ಮೊಟಕುಗೊಳಿಸಿದ ಬೊಮ್ಮಾಯಿ, ಹಾವೇರಿ ಬಿಜೆಪಿ ಕಚೇರಿಯಿಂದ ತೆರಳಿದರು.
ಬಿಸಿಯೂಟ ತುಂಬ ಅಗತ್ಯ, ದಯವಿಟ್ಟು ಅರ್ಧದಿನ ರಜೆ ಕೊಡ್ಬೇಡಿ: ಮನಕಲಕುವಂತಿದೆ ಈ ವಿದ್ಯಾರ್ಥಿ ಬರೆದ ಪತ್ರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 13 =
Remember me
