ಬೊಮ್ಮನಹಳ್ಳಿ:ಬೊಮ್ಮನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಲಿರುವ ಜೆಡಿಎಸ್ ಅಭ್ಯರ್ಥಿ ಬರೋಬ್ಬರಿ 408 ಕೋಟಿ ರೂ. ಆಸ್ತಿಯ ಒಡೆಯರಾಗಿದ್ದಾರೆ.
ಆದರೆ ಇವರು ಯಾವುದೇ ಸದ್ದು ಗದ್ದಲವಿಲ್ಲದೆ ಸರಳವಾಗಿ ಬಂದು ನಾಮಪತ್ರ ಸಲ್ಲಿಸಿದ್ದಾರೆ. ಅಂದಹಾಗೆ ಬೊಮ್ಮನಹಳ್ಳಿ ಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದವರು ಕೆ. ನಾರಾಯಣ ರಾಜು. ಇವರು ಈ ಹಿಂದೆ ಬಿಜೆಪಿಯಲ್ಲಿ ಬಿಳರೆಕಳ್ಳಿಯಿಂದ ಕಾರ್ಪೋರೇಟರ್ ಆಗಿದ್ದವರು.
ಆದರೆ ಇತ್ತೀಚೆಗೆ ಅವರು ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದರು. ಆಡಂಬರದ ಶೋ ಮಾಡದೆ ಕೇವಲ ಐದು ಜನರೊಟ್ಟಿಗೆ ಬಂದು ನಾಮಪತ್ರ ಸಲ್ಲಿಸಿ ತೆರಳಿದ್ದಾರೆ. ಇವರಿಗೆ ರಾಜ್ಯಸಭಾ ಮಾಜಿ‌ ಸದಸ್ಯ ಉಪೇಂದ್ರ ರೆಡ್ಡಿ ಮತ್ತಿತರರು ಸಾಥ್ ನೀಡಿದ್ದರು. ಇಲ್ಲಿ ಮೂರು ಬಾರಿ ಎಂ ಸತೀಶ್ ರೆಡ್ಡಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದು ಅವರ ವಿರುದ್ಧವಾಗಿ ಕೆ. ನಾರಾಯಣ ರಾಜು ಸ್ಪರ್ಧಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
