ಬೆಂಗಳೂರು:ಕರೊನಾ ಮೂರನೇ ಅಲೆಗೆ ತಡೆಯೊಡ್ಡುವ ಉದ್ದೇಶದಿಂದ ಕೇರಳ ಮತ್ತು ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ರಾಜ್ಯದ ಎಂಟು ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂವನ್ನು ಶುಕ್ರವಾರ ರಾತ್ರಿಯಿಂದಲೇ ಜಾರಿಗೊಳಿಸಿರುವ ಸರ್ಕಾರ, 9, 10 ಹಾಗೂ ಪಿಯು ತರಗತಿಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಜತೆಗೆ, ರಾಜ್ಯಾದ್ಯಂತ ಅನ್ವಯಿಸುವಂತೆ ರಾತ್ರಿ ಕರ್ಫ್ಯೂ ಅವಧಿ ಹೆಚ್ಚಿಸಲಾಗಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರೊನಾ ನಿರ್ವಹಣೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶುಕ್ರವಾರ ಉನ್ನತಮಟ್ಟದ ಸಭೆ ನಡೆಯಿತು. ಕೇರಳ, ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡವು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸೋಂಕು ದೃಢತೆ ಪ್ರಮಾಣ ಶೇ.2ರ ಆಸುಪಾಸಿನಲ್ಲಿ ಇರುವ ಬಗ್ಗೆ ಗಂಭೀರ ಚರ್ಚೆ ನಡೆಸಿತು. ತಜ್ಞರ ತಾಂತ್ರಿಕ ಸಲಹಾ ಸಮಿತಿ ನೀಡಿದ ಸಲಹೆಗಳನ್ನು ಪರಾಮಶಿಸಿತು. ಅಲ್ಲದೆ, ಶಾಲೆ- ಕಾಲೇಜುಗಳು ಪುನರಾರಂಭದ ಕುರಿತು ಸಮಾಲೋಚಿಸಿತು.
ವೀಕೆಂಡ್ ಕರ್ಫ್ಯೂಗೆ ಸಹಮತ: ಪರಿಸ್ಥಿತಿ ಕೈಮೀರದಂತೆ ತಡೆಯಲು ಕೇರಳ ಮತ್ತು ಮಹಾರಾಷ್ಟ್ರ ಗಡಿಯಲ್ಲಿರುವ ತಲಾ ನಾಲ್ಕು ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಲು ನಿರ್ಧರಿಸಿದ್ದು, ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಜಾರಿಯಲ್ಲಿರಲಿದೆ ಎಂದು ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರಾಜ್ಯಾದ್ಯಂತ ಈಗ ಜಾರಿಯಲ್ಲಿರುವ ಕರ್ಫ್ಯೂ ಅವಧಿಯನ್ನು (ರಾತ್ರಿ 10 ರಿಂದ ಬೆಳಗ್ಗೆ 5ರವರೆಗೆ) ಒಂದು ತಾಸು ಹೆಚ್ಚಿಸಿದ್ದು, ರಾತ್ರಿ 9 ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಇರಲಿದೆ.
ಕಾರ್ಯಪಡೆ ರಚನೆ:ರಾಜ್ಯಮಟ್ಟದ ಕರೊನಾ ಕಾರ್ಯಪಡೆಯನ್ನು ಒಂದೆರಡು ದಿನಗಳಲ್ಲಿ ರಚಿಸಲಾಗುವುದು.ಈ ವಿಷಯದಲ್ಲಿ ವಿಳಂಬವಾಗದೆಂದು ಬೊಮ್ಮಾಯಿ ಸ್ಪಷ್ಟಪಡಿಸಿದರು. ಕರೊನಾ ನಿರ್ವಹಣೆಯ ಉಪಕ್ರಮಗಳು ಮತ್ತು ಅಗತ್ಯ ಖರೀದಿಗಳ ವಿಷಯದಲ್ಲಿ ತ್ವರಿತ ನಿರ್ಧಾರ ಮತ್ತು ಅನುಷ್ಠಾನದ ದೃಷ್ಟಿಯಿಂದ ಕಾರ್ಯಪಡೆ ಪಾತ್ರ ಮಹತ್ವದ್ದಾಗಿದೆ.
ಕರ್ಫ್ಯೂ ಅವಧಿಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಸೋಂಕು ನಿರ್ವಹಣೆ ಮತ್ತು ನಿಯಂತ್ರಣಕ್ಕಾಗಿ ಜನರು ಕೂಡ ಸಹಕರಿಸಬೇಕು.
|ಬಸವರಾಜ ಬೊಮ್ಮಾಯಿ, ಸಿಎಂ
(8 ಜಿಲ್ಲೆಗಳಿಗೆ ಮಾತ್ರ ಅನ್ವಯ)
ಕರೊನಾ ನಿಯಂತ್ರಣ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಮೊದಲ ಹಂತದಲ್ಲಿ 9, 10ನೇ ತರಗತಿ ಶಾಲೆಗಳು ಹಾಗೂ ಪಿಯು ಕಾಲೇಜುಗಳನ್ನು ಆ.23ರಿಂದ ಆರಂಭಿಸಲು ಷರತ್ತುಬದ್ಧ ಒಪ್ಪಿಗೆ ನೀಡಲಾಗಿದೆ. ವಿದ್ಯಾರ್ಥಿಗಳ ದಟ್ಟಣೆ, ಗುಂಪುಗೂಡುವುದನ್ನು ತಡೆಯಲೆಂದು ದಿನ ಬಿಟ್ಟು ದಿನ ತರಗತಿ ನಡೆಸಲು ಸೂಚಿಸಲಾಗಿದೆ. ವಿಸõತ ಪ್ರಮಾಣಿತ ಕಾರ್ಯವಿಧಾನವನ್ನು ಹೊರಡಿಸಲಾಗುವುದು. ನಂತರ ಕರೊನಾ ಪರಿಸ್ಥಿತಿ ಅವಲೋಕಿಸಿ ಪ್ರಾಥಮಿಕ ಶಾಲೆಗಳು ಹಾಗೂ 6 ರಿಂದ 8ನೇ ತರಗತಿ ಶಾಲೆಗಳನ್ನು ತೆರೆಯುವ ಬಗ್ಗೆ ಆಗಸ್ಟ್ ಅಂತ್ಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದಕ್ಕೆ ಉನ್ನತಮಟ್ಟದ ಸಭೆ ಸಮ್ಮತಿಸಿದೆ ಎಂದು ಸಿಎಂ ವಿವರಿಸಿದರು.
ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಬೆಳಗಾವಿ, ವಿಜಯಪುರ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳು.
ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷೆ; ಶಾಸಕರ ಬೆಂಬಲಿಗರ ಕಿರುಕುಳ ಆರೋಪ

ರಾಜ್ಯದಲ್ಲಿ ಮತ್ತೊಬ್ಬ ತಹಸೀಲ್ದಾರ್​ರಿಂದ ಕೋವಿಡ್​ ನಿಯಮ ಉಲ್ಲಂಘನೆ; ಕಾನೂನಿಗೂ ಮೀರಿ ಅದ್ಧೂರಿ ಕಾರ್ಯಕ್ರಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
