ವಿಜಯಪುರ:ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಇಲ್ಲೊಂದಷ್ಟು ಹುಡುಗರು ಇಂದು ಹೋಳಿ ಹಬ್ಬ ಮಾಡಿ ಸಂಭ್ರಮಿಸುತ್ತಿದ್ದರು. ಆದರೆ ದುರದೃಷ್ಟವಶಾತ್, ಅವರೆಲ್ಲ ಶೋಕದ ಮಡುವಿನಲ್ಲಿ ಮುಳುಗುವಂತಾಗಿದೆ. ಅಷ್ಟಕ್ಕೂ ಕಾರಣವಾಗಿದ್ದು ಅದೊಂದು ದುರಂತ.
ವಿಜಯಪುರ ಜಿಲ್ಲೆ ಕೊಲ್ಹಾರ ತಾಲ್ಲೂಕಿನ ತಳೇವಾಡ ಗ್ರಾಮದಲ್ಲಿ ಈ ಅವಘಡ ಸಂಭವಿಸಿದ್ದು, ಹಣಮಂತ ಬೀರಪ್ಪ ವಾಲಿಕಾರ (12) ಎಂಬ ಬಾಲಕ ಸಾವಿಗೀಡಾಗಿದ್ದಾನೆ. ಈತ ಹೋಳಿಯಾಟಕ್ಕೆಂದು ಅಣಿಗೊಳಿಸುತ್ತಿದ್ದಾಗ ವಿದ್ಯುತ್ ಶಾಕ್​ಗೆ ಒಳಗಾಗಿ ಸಾವಿಗೀಡಾಗಿದ್ದಾನೆ.
ಬಣ್ಣದಾಟಕ್ಕೆಂದು ಗ್ರಾಮ ಪಂಚಾಯಿತಿ ವತಿಯಿಂದ ನೀರಿನ ತೊಟ್ಟಿ ನಿರ್ಮಿಸಲಾಗಿತ್ತು. ಅದಕ್ಕೆ ನೀರು ತುಂಬುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ತುಂಡಾಗಿ ನೀರಿನ ತೊಟ್ಟಿಗೆ ಬಿದ್ದಿದೆ. ಇದರಿಂದ ವಿದ್ಯುತ್ ಶಾಕ್​ಗೆ ಒಳಗಾಗಿ ಈತ ಮೃತಪಟ್ಟಿದ್ದಾನೆ.
ಘಟನೆಗೆ ಗ್ರಾಮ ಪಂಚಾಯತಿಯ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಗ್ರಾಮ ಪಂಚಾಯಿತಿ ಮುಂದೆ ಬಾಲಕನ ಶವವಿಟ್ಟು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಸ್ಥಳಕ್ಕೆ ಕೂಡಗಿ ಎನ್​​ಟಿಪಿಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಲೇಜೇ ಸರಿ ಇಲ್ಲ ಅಂತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!

ನಾನ್ಯಾರನ್ನೂ ಪ್ರೀತಿಸಿಲ್ಲ, ನನ್ನ ಸಾವಿಗೆ ಪ್ರೀತಿ ಕಾರಣವಲ್ಲ ಎಂದು ಹೇಳಿ 23ನೇ ಮಹಡಿಯಿಂದ ಹಾರಿ ಸತ್ತ ವಿದ್ಯಾರ್ಥಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
