ಬೆಂಗಳೂರು:ಬೆಂಗಳೂರಿನಲ್ಲಿ ಇಬ್ಬರು ಯುವಕರಿಂದ‌ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪ್ರೀತಿಸಿದ ಹುಡುಗಿಯ ಮೇಲೆ ಪ್ರಿಯಕರ ಹಾಗು ಸ್ನೇಹಿತನಿಂದ ಲೈಂಗಿಕ ದೌರ್ಜನ್ಯ ನಡೆದಿದ್ದು ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ಪುರುಷೋತ್ತಮ್ ಹಾಗು ಚೇತನ್ ಎಂದು ಗುರುತಿಸಲಾಗಿದೆ. ಪುರುಷೋತ್ತಮ್ ಹಾಗು ಸಂತ್ರಸ್ತ ಯುವತಿ ಒಂದು ವರ್ಷದಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ಮೂಲತಃ ತುಮಕೂರಿನ ನಿವಾಸಿಯಾದ ಯುವತಿ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ಮೊದಲನೇ ವರ್ಷದ ಪ್ಯಾರಾ ಮೇಡಿಕಲ್ ವಿಧ್ಯಾಬ್ಯಾಸ ಮಾಡುತ್ತಿದ್ದಳು. ಈ ಪುರುಷೋತ್ತಮ, ತುಮಕೂರಿನ ಕೊಟಗೆರೆ ನಿವಾಸಿಯಾಗಿದ್ದು ಇಬ್ಬರೂ ಒಂದು ವರ್ಷದಿಂದ ಪ್ರೀತಿಸುತ್ತಿದ್ದರು.
ಕಳೆದ ಒಂದು ವಾರದ ಹಿಂದೆ ಯುವತಿಯನ್ನು ಆರೋಪಿ ಪುರುಷೋತ್ತಮ ಭೇಟಿ ಮಾಡಿದ್ದ. ನಂತರ ಆತ ಯುವತಿಯ ಮೊಬೈಲ್ ಪಡೆದು ಬೆಂಗಳೂರಿಗೆ ಬಂದಿದ್ದ. ಎರಡು ದಿನಗಳ ಹಿಂದೆ ಪ್ರಿಯಕರನಿಗೆ ಕರೆ ಮಾಡಿ ನನ್ನ ಮೊಬೈಲ್ ವಾಪಸ್ ಕೊಡು ಎಂದು ಯುವತಿ ತಿಳಿಸಿದ್ದಳು.
ಅದಕ್ಕೆ ಆರೋಪಿ ಪುರುಷೋತ್ತಮ, “ಬೆಂಗಳೂರಿನ ಮೆಜೆಸ್ಟಿಕ್ ಬಳಿ ಬಾ. ನಿನ್ನ ಮೊಬೈಲ್ ಕೊಡ್ತಿನಿ” ಎಂದಿದ್ದ. ಈ ಹಿನ್ನೆಲೆಯಲ್ಲಿ ಜೂನ್ 6ರಂದು ಯುವತಿ ಬೆಂಗಳೂರಿನ ಮೆಜೆಸ್ಟಿಕ್ ಗೆ ಬಂದಿದ್ದಳು.
ಆರೋಪಿ ಪುರುಷೋತ್ತಮ, ಯುವತಿಯನ್ನು ಗರಿನಗರದ ಈರಣ್ಣಗುಡ್ಡೆಯ ತನ್ನ ಸ್ನೇಹಿತ ಚೇತನ್ ಮನೆಗೆ ಕರೆದುಕೊಂಡು ಬಂದಿದ್ದ. ನಂತರ ಮೂವರೂ ಮದ್ಯಪಾನ ಮಾಡಿದ್ದಾರೆ. ಈ ಸಂದರ್ಭ ಯುವತಿ, ನನ್ನ ಮೊಬೈಲ್ ಕೊಡು ಊರಿಗೆ ಹೋಗಬೇಕು ಅಂತ ತಿಳಿಸಿದ್ದಳು.
ಆಗ ಪುರುಷೋತ್ತಮ, ‘ಇವತ್ತು ಇಲ್ಲೆ ಇರು’ ಎಂದು ಹೇಳಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ತನ್ನ ಸ್ನೇಹಿತ ಚೇತನ್ ನನ್ನೂ ಕರೆಸಿದ್ದಾನೆ. ಇಬ್ಬರು ಸೇರಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಈ ಸಂದರ್ಭ ಯುವತಿಯ ಚೀರಾಟ ಕೇಳಿ ಅಕ್ಕಪಕ್ಕದ ಮೆನೆಯವರು ಬಂದಿದ್ದಾರೆ. ಸ್ಥಳೀಯರು ಕೂಡಲೇ ಗಿರಿನಗರ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದು ತಕ್ಷಣವೇ ಬಂದು ಯುವತಿಯನ್ನು ರಕ್ಷಿಸಿ, ಆರೋಪಿಗಳಾದ ಚೇತನ್ ಹಾಗು ಪುರುಷೋತ್ತಮರನ್ನ ಬಂಧಿಸಿದ್ದಾರೆ. ಈ ಪ್ರಕರಣ ಗಿರಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಗ್ಯಾರಂಟಿ ಯೋಜನೆ ಅರ್ಜಿಯಲ್ಲಿ ಜಾತಿ ಕಾಲಂ ಯಾಕೆ? ಆರ್ ಅಶೋಕ್ ತೀವ್ರ ವಾಗ್ದಾಳಿ

ಇನ್ನು ಗೂಗಲ್ ಪೇ ಬಳಸಲು ಆಧಾರ್ ಇದ್ದರೆ ಸಾಕು!

ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ ದರ ಏರಿಕೆ ಬಿಸಿ? ಬೆಲೆ ಏರಿಕೆಗೆ ಪಟ್ಟು ಹಿಡಿದ ಒಕ್ಕೂಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + three =
Remember me
