ಉಳ್ಳಾಲ (ದ.ಕ.):ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಉಚ್ಚಿಲಗುಡ್ಡೆ ಎಂಬಲ್ಲಿ ಗಂಟಲಲ್ಲಿ ಚಾಕಲೆಟ್ ಸಿಲುಕಿಕೊಂಡ ಪರಿಣಾಮ ಎಂಟು ವರ್ಷದ ಬಾಲಕ ಭಾನುವಾರ ಮೃತಪಟ್ಟಿದ್ದಾನೆ.
ಉಚ್ಚಿಲ ನಿವಾಸಿ ಅಬ್ದುಲ್ ರಹೀಮ್ ಎಂಬುವರ ಪುತ್ರ ಫೈಝಾನ್ ಮೃತ ಬಾಲಕ. ಶನಿವಾರ ರಾತ್ರಿ ಅಂಗಡಿಗೆ ಹೋಗಿದ್ದ ಆತ ಹಿಂದಿರುಗಿ ಬರುವಾಗ ಚಾಕಲೆಟ್ ತಿಂದಿದ್ದಾನೆ. ಕೆಲವೇ ಹೊತ್ತಿನಲ್ಲಿ ಗಂಟಲಲ್ಲಿ ಸಮಸ್ಯೆ ಎದುರಾಗಿ, ಆಸ್ಪತ್ರೆಗೆ ಕೊಂಡೊಯ್ಯುವ ಮೊದಲೇ ಮೃತಪಟ್ಟಿದ್ದಾನೆ.
ಶ್ವಾಸಕೋಶದಲ್ಲಿ ಸಮಸ್ಯೆ ಎದುರಾಗಿದ್ದೇ ಸಾವಿಗೆ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ರಹೀಮ್ ಅವರ ಇಬ್ಬರು ಗಂಡು ಮಕ್ಕಳ ಪೈಕಿ ಫೈಝಾನ್ ದೊಡ್ಡವನು. ವಿದೇಶದಲ್ಲಿ ಕೆಲಸದಲ್ಲಿದ್ದ ರಹೀಂ ಲಾಕ್​ಡೌನ್ ಹಿನ್ನೆಲೆಯಲ್ಲಿ ಊರಿನಲ್ಲೇ ಇದ್ದಾರೆ.
ಸೆ.1ರಿಂದ ಶಾಲಾ- ಕಾಲೇಜು ಆರಂಭ ಪ್ರಕ್ರಿಯೆ; ಅರ್ಧದಷ್ಟು ಮಕ್ಕಳು, ಶಿಕ್ಷಕರಿಗಷ್ಟೇ ಅವಕಾಶ; ಹೀಗಿರಲಿದೆ ಮಾರ್ಗಸೂಚಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + eleven =
Remember me
