ಬೆಂಗಳೂರು:ಬಿಪಿಎಲ್ ಪಡಿತರ ಚೀಟಿದಾರರಿಗೆ ಆಗಸ್ಟ್‌ನಲ್ಲಿ ತಲಾ ಐದು ಕೆಜಿ ಅಕ್ಕಿಯ ಹಣ ಇನ್ನೊಂದು ವಾರದಲ್ಲಿ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಅಕ್ಕಿಯಾದರೆ ಪ್ರತಿ ತಿಂಗಳು 10 ಅಥವಾ 11ನೇ ತಾರೀಖಿಗೆ ವಿತರಿಸಲಾಗುತ್ತಿತ್ತು ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು ನಗದು ಮೊತ್ತ ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿದೆ. ತಾಂತ್ರಿಕ ಸಮಸ್ಯೆಗಳು ಬಗೆಹರಿಸಿದ್ದು, ಒಂದು ಬಟನ್ ಒತ್ತಿದರೆ ಸಾಕು ಎಲ್ಲ ಅರ್ಹ ಲಾನುಭವಿಗಳ ಖಾತೆಗೆ ಪಾವತಿ ವ್ಯವಸ್ಥೆಯಾಗಿದೆ.
ತಲಾ ಐದು ಕೆಜಿ ಅಕ್ಕಿ ವಿತರಿಸಲು ಮಾಸಿಕ ಎರಡೂವರೆ ಲಕ್ಷ ಟನ್ ಅಕ್ಕಿ ಅಗತ್ಯವಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶ ಕೆಜಿಗೆ 39 ರಿಂದ 40 ರೂ.ನಂತೆ ಪೂರೈಸಲು ಒಲವು ವ್ಯಕ್ತಪಡಿಸಿವೆ. ರಾಜ್ಯದ ಗೋದಾಮುಗಳಿಗೆ ಅಂತಿಮವಾಗಿ ಎಷ್ಟು ದರಕ್ಕೆ ವಿಲೇವಾರಿ ಮಾಡುವಿರಿ ಎಂದು ಕೇಳಿದ್ದು, ನಿಖರ ಬೆಲೆ ತಿಳಿಸಿದ ನಂತರ ಸರ್ಕಾರ ಮುಂದಿನ ಕ್ರಮವಹಿಸಲಿದೆ ಎಂದರು.
ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಬಯಸಿ ಮೂರು ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಬಗ್ಗೆ ತಪಾಸಣೆ, ವಿಚಾರಣೆ ಮಾಡಿದ ನಂತರ ವೈದ್ಯಕೀಯ ಉದ್ದೇಶಕ್ಕೆ ಮಾತ್ರ ಹೊಸ ಬಿಪಿಎಲ್ ಪಡಿತರ ಚೀಟಿ ವಿತರಿಸುವ ಆಲೋಚನೆಯಿದೆ.
ಚಾಲ್ತಿ ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಳ ತಿದ್ದುಪಡಿ, ಮನೆ ಯಜಮಾನಿ ಬದಲಾವಣೆ, ಹೊಸ ಹೆಸರು ಸೇರ್ಪಡೆ ಅಥವಾ ಕೈಬಿಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕೆ.ಎಚ್.ಮುನಿಯಪ್ಪ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + eight =
Remember me
