ವಿಜಯಪುರ:ನನ್ನ ವಿರುದ್ಧ ಮಾತನಾಡಲೆಂದೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೆಲವು ಹಂದಿ ಹಾಗೂ ಬೀದಿನಾಯಿಗಳನ್ನು ಬಿಟ್ಟಿದ್ದಾನೆ ಎಂದು ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​ ಆರೋಪಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ನನ್ನ ವಿರುದ್ಧ ಕೆಲವು ಹಂದಿ, ಬೀದಿನಾಯಿಗಳು ಬೊಗಳುತ್ತಿರುತ್ತವೆ ಅದಕ್ಕೆಲ್ಲಾ ಉತ್ತರ ಕೊಡಲು ಆಗುವುದಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಚಿವ ಮುರುಗೇಶ್​ ನಿರಾಣಿಗೆ ಚಾಟಿ ಬೀಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ನಾನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಂತೆ ಹಾಗೂ ವಿರೋಧ ಪಕ್ಷದ ನಾಯಕನಂತೆ ಪ್ರೋ ಆ್ಯಕ್ಷಿವ್​ ಆಗಿ ಕೆಲಸ ಮಾಡಿದ್ದೇನೆ. ಉತ್ತರ ಕರ್ನಾಟಕದ ಭಾಗದಲ್ಲೂ ಸಮರ್ಥ ನಾಯಕರಿದ್ದಾರೆ ಎಂಬುದನ್ನು ತೋರಿಸಿಕೊಟ್ಟಿದ್ದೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಆರ್​.ಅಶೋಕ್​ ಹಾಗೂ ವಿಜಯೇಂದ್ರ ವಿರುದ್ಧ ಹರಿಹಾಯ್ದಿದ್ದಾರೆ.
ಇದನ್ನೂ ಓದಿ:ಸಿಎಂ ಆದ ಮರುದಿನವೇ ಪ್ರಮುಖ ನಿರ್ಧಾರ; ಜನಸೇವೆಯೇ ನಮ್ಮ ಆದ್ಯತೆ ಎಂದ ಭಜನ್​ಲಾಲ್​ ಶರ್ಮಾ
ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿನ ಮಹಿಳೆ ಪ್ರಕರಣ ಹಾಗೂ ಡಿ.ಕೆ. ಶಿವಕುಮಾರ್​ ವಿರುದ್ಧದ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿರುವುದನ್ನು ಖಂಡಿಸಿ ಜೋಡೆತ್ತುಗಳು ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಹೇಳಿದ್ದವು. ಆದರೆ, ಯಾವುದೇ ರೀತಿಯ ಉಗ್ರ ಹೋರಾಟ ಮಾಡಲಿಲ್ಲ. ಬದಲಿಗೆ ಖಂಡನೆ ಮತ್ತು ಟ್ವೀಟ್​ಗೆ ಸೀಮಿತವಾದವು. ಆದರೆ, ನಾನು ಡಿ.ಕೆ. ಶಿವಕುಮಾರ್​ ವಿಚಾರವಾಗಿ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕೋರ್ಟ್​ ಮೆಟ್ಟಿಲೇರಿದ್ದೇನೆ.
ಕಳೆದ 11 ವಿಧಾನಮಂಡಲ ಅಧಿವೇಶನಗಳಲ್ಲಿ ಕೊನೆಗೆ ಒಂದು ದಿನ ಕಾಟಾಚಾರಕ್ಕೆ ಎಂಬಂತೆ ಉತ್ತರ ಕರ್ನಾಟಕ ಬಗ್ಗೆ ಚರ್ಚಿಸಲಾಗುತ್ತಿತ್ತು. ಆದರೆ,  ಈ ಬಾರಿ ಮೊದಲ ದಿನವೇ ನಾನು ಗಟ್ಟಿ ಧ್ವನಿ ಎತ್ತಿದ್ದರಿಂದ ಮೊದಲ ವಾರದಲ್ಲೇ ಸಮಗ್ರವಾಗಿ ಚರ್ಚಿಸಲು ಅವಕಾಶ ದೊರಕಿತು ಎಂದು ಬಿಜೆಪಿ ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
