ಉಡುಪಿ:ಬ್ರಹ್ಮಾವರ ತಾಲೂಕಿನ ನೈಲಾಡಿ ಸಮೀಪ ಆಹಾರ ಹುಡುಕಿ ಬಂದಿದ್ದ ಚಿರತೆಯೊಂದು ಮನೆಯ ಕೋಣೆಯೊಳಗೆ ಬಂಧಿಯಾಗಿದೆ.
ಇಂದು ಬೆಳಗ್ಗಿನ ಜಾವ ಆಹಾರ ಹುಡುಕತ್ತಾ ಬಂದಿದ್ದ ಚಿರತೆ ಸಾಕು ನಾಯಿಯ ಬೇಟೆಗೆ ಮುಂದಾಗಿದೆ. ಈ ವೇಳೆ ಹೆದರಿದ ನಾಯಿ ಮನೆಯ ಕೋಣೆಯೊಳಗೆ ನುಗ್ಗಿದೆ‌. ನಾಯಿಯನ್ನೇ ಬೆನ್ನಟ್ಟಿ ಚಿರತೆ ಕೊಠಡಿಗೆ ಹೋಗಿದೆ. ಕೋಣೆಯೊಳಗೆ ಸದ್ದು ಕೇಳಿ ಮನೆಯವರು ಎಚ್ಚರಗೊಂಡು ಕೋಣೆ ಬಾಗಿಲು ಹಾಕಿದ್ದಾರೆ.
ಸ್ಥಳಕ್ಕೆ ಶಂಕರನಾರಾಯಣ ವಲಯದ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯ್ಕ್, ಸಿಬ್ಬಂದಿ ರವಿ, ರವೀಂದ್ರ, ಸಂತೋಷ್ ಜೋಗಿ, ವಿಠಲ್ ನಾಯ್ಕ್, ಲಕ್ಷ್ಮಣ, ಶಿವು, ಸುದೀಪ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿರಿ:ಸಲೂನ್​ ಹುಡುಗನ ಮರ್ಮಾಂಗ ಸ್ಪರ್ಶಿಸಿದ ಲಾಯರ್​: ದೂರಿನಲ್ಲಿ ವಕೀಲನ ಕರಾಳ ಮುಖ ಅನಾವರಣ!
ಉಡುಪಿ: ಬ್ರಹ್ಮಾವರ ತಾಲೂಕಿನ ನೈಲಾಡಿ ಸಮೀಪ ಆಹಾರ ಹುಡುಕಿ ಬಂದಿದ್ದ ಚಿರತೆಯೊಂದು ಮನೆಯ ಕೋಣೆಯೊಳಗೆ ಬಂಧಿಯಾಗಿದೆ.#Bramavara#Udupi#Leopard#ForestDept#AnimalTrappic.twitter.com/sOOMI6UTBf
— Vijayavani (@VVani4U)March 21, 2021

ಬೋನ್ ಇಟ್ಟು ಅರಣ್ಯ ಇಲಾಖೆ ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ಹಿಡಿದರು. ಸ್ಥಳದ ಸುತ್ತಲೂ ಊರಾರು ಸ್ಥಳೀಯರು ಸೇರಿದ್ದರು. ಸತತ ಒಂದೂವರೆ ಗಂಟೆಯ ನಿರಂತರ ಕಾರ್ಯಾಚರಣೆ ನಡೆಸಿ ಚಿರತೆ ಯನ್ನು ಬಂಧಿಸಲಾಗಿದೆ. ಬಳಿಕ ಸೈಬರ್ರಕಟ್ಟೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಮೀಸಲು ಅರಣ್ಯದಲ್ಲಿ ಸುರಕ್ಷಿತವಾಗಿ ಬಿಡಲಾಯಿತು.(ದಿಗ್ವಿಜಯ ನ್ಯೂಸ್​)
6 ತಿಂಗಳ ಬಳಿಕ ಕೆರೆಯ ಆಳದಲ್ಲಿ ಪತ್ತೆಯಾಯ್ತು ಮೊಬೈಲ್​ ಫೋನ್​: ಸ್ವಿಚ್​ ಆನ್​ ಮಾಡಿದಾಗ ಕಾದಿತ್ತು ಶಾಕ್​!

ಒಡೆದ ಮನಸ್ಸುಗಳಿಗೆ ಅಮೃತ; ಅಪಾರ್ಟ್ಮೆಂಟ್​ನಲ್ಲಿ ಹೀಗೊಂದು ಕಥೆ…

ವೈವಿಧ್ಯಮಯ ಅನುಭವ ಪರಿಪೂರ್ಣ ವ್ಯಕ್ತಿತ್ವ; ಆರೆಸ್ಸೆಸ್​ನ ರಾಷ್ಟ್ರೀಯ ಸರಕಾರ್ಯವಾಹರಾಗಿ ಆಯ್ಕೆಯಾಗಿರುವ ಕನ್ನಡಿಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
