ಬೆಂಗಳೂರು: ಈ ಬಾರಿಯ ಈದ್ ಮಿಲಾದ್ (ಅ.30) ವೇಳೆ ಸಾಮೂಹಿಕ ಮೆರವಣಿಗೆ ತೆರಳಲು ಮತ್ತು ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದಕ್ಕೆ ಸರ್ಕಾರ ಅವಕಾಶ ನಿರಾಕರಿಸಿದೆ.
ಕರೊನಾ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಂಡಿದ್ದು, ಮಾರ್ಗಸೂಚಿ ಹೊರಡಿಸಿದೆ. ಈದ್ ಮಿಲಾದ್ ದಿನದಂದು ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಸಭೆಗಳನ್ನೂ ಸಹ ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಕೋವಿಡ್-19 ಶಿಷ್ಟಾಚಾರದಂತೆ ಮಸೀದಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಬೇಕೆಂದು ಸೂಚಿಸಲಾಗಿದೆಯಲ್ಲದೇ, ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ, ಡಿಜೆ ಬಳಕೆಗೂ ನಿಷೇಧ ಹೇರಲಾಗಿದೆ.
60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಹಬ್ಬ ಆಚರಿಸಬೇಕು, ಮಸೀದಿ- ಪ್ರಾರ್ಥನಾ ಮಂದಿರದಲ್ಲಿ ಸ್ಯಾನಿಟೈಸ್ ಹಾಗೂ ಸೋಪಿನಿಂದ ಕೈ ತೊಳೆಯಲು ಪ್ರವೇಶ ದ್ವಾರದಲ್ಲೇ ಸೂಕ್ತ ವ್ಯವಸ್ಥೆ ಮಾಡಬೇಕು, ಕಡ್ಡಾಯವಾಗಿ ಎಲ್ಲರೂ 6 ಅಡಿ ಅಂತರದ ದೈಹಿಕ ಅಂತರಕಾಯ್ದುಕೊಳ್ಳಲೇ ಬೇಕೆಂದು ಹೇಳಲಾಗಿದೆ.
ಖಬರಸ್ಥಾನ ಒಳಗೊಂಡಂತೆ ಯಾವುದೇ ತೆರೆದ ಜಾಗದಲ್ಲೂ ಸಾಮೂಹಿಕ ಪ್ರಾರ್ಥನೆ, ಪ್ರವಚನ ಆಯೋಜಿಸುವಂತಿಲ್ಲ. ವಕ್ಫ್ ಸಂಸ್ಥೆಗಳ ಆಡಳಿತ ಮಂಡಳಿ, ಮುತವಲ್ಲಿ, ಆಡಳಿತಾಧಿಕಾರಿಗಳು ಈದ್ ಮಿಲಾದ್ ಆಚರಣೆ ಮಾರ್ಗಸೂಚಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸೂಕ್ತಕ್ರಕೈಗೊಳ್ಳಬೇಕೆಂದು ಸರ್ಕಾರ ಹೇಳಿದೆ.
ರಾಜ್ಯದ ವಕ್ಫ್ ಮಂಡಳಿಯು ಜಿಲ್ಲಾ ವಕ್ಫ್ ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳು ಎಲ್ಲಾ ಈದ್ಗಾ, ಮಸೀದಿ, ದರ್ಗಾ ಮತ್ತಿತರ ಸಂಸ್ಥೆಗಳಿಗೆ ಈ ಆದೇಶವನ್ನು ಜಾರಿ ಮಾಡುವುದು. ಈ ಆದೇಶವನ್ನು ಎಲ್ಲಾ ವಕ್ಫ್ ಸಂಸ್ಥೆಗಳು ಕಟ್ಟು ನಿಟ್ಟಾಗಿ ಪರಿಪಾಲಿಸಲು ಕ್ರಮಕೈಗೊಳ್ಳಬೇಕೆಂದು ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಅ.20ರಿಂದ ಭಾರಿ ಮಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
