ಬೆಂಗಳೂರು: ಆಸ್ಪತ್ರೆಯ ಆವರಣದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸುವಂತೆ ತಿಳಿ ಹೇಳಿದ ವೈದ್ಯರು ಮತ್ತು ನರ್ಸ್‌ಗೆ ರೌಡಿ ಗ್ಯಾಂಗ್ ನಿಂದಿಸಿ ಆಂಬುಲೆನ್ಸ್ ಗಾಜು ಒಡೆದು ದಾಂಧಲೆ ನಡೆಸಿದೆ.
ಎಲೆಕ್ಟ್ರಾನಿಕ್ಸ್ ಸಿಟಿಯ ಬ್ಲಾಸಂ ಆಸ್ಪತ್ರೆ ಆಸ್ಪತ್ರೆ ನಿರ್ದೇಶಕ ಮಂಜುನಾಥ್ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ರೌಡಿ ಮಧು, ಗೌತಮ್ ಮತ್ತವರ ಸಹಚರರ ವಿರುದ್ಧ ಪ್ರಕರಣ ದಾಖಲಿಸಿ ಬಂಧನಕ್ಕೆ ಬಲೆ ಬೀಸಿರುವುದಾಗಿ ಪರಪ್ಪನ ಅಗ್ರಹಾರ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿಕರೊನಾ ಸೋಂಕಿತ ಗರ್ಭಿಣಿಗೆ ಗರ್ಭಪಾತ ಮಾಡಿದ ವೈದ್ಯರು
ಮಧು ಸ್ನೇಹಿತ ರಸ್ತೆ ಅಪಘಾತಕ್ಕೆ ಒಳಗಾಗಿ ಚಿಕಿತ್ಸೆಗಾಗಿ ಬ್ಲಾಸಂ ಆಸ್ಪತ್ರೆಗೆ ದಾಖಲಾಗಿದ್ದ. ಮೇ 6ರ ಮಧ್ಯಾಹ್ನ 3.30ರಲ್ಲಿ ಸ್ನೇಹಿತನ ಆರೋಗ್ಯ ವಿಚಾರಿಸಲು ಮಧು ಮತ್ತು ಆತನ ಸಹಚರರು ಆಸ್ಪತ್ರೆಗೆ ಹೋಗಿದ್ದರು.ಆಗ ಮಾಸ್ಕ್ ಧರಿಸುವಂತೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ. ಅಷ್ಟಕ್ಕೆ ಕುಪಿತಗೊಂಡ ಮಧು, ‘ನನಗೆ ಬುದ್ದಿವಾದ ಹೇಳಲು ಬರುತ್ತೀರಾ. ನಾನು ಯಾರು ಗೊತ್ತಾ’ ಎಂದು ಜೋರಾಗಿ ಕೂಗಾಡಿದ್ದಾನೆ.
ವೈದ್ಯರು ಬಂದು ಪ್ರಶ್ನಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಆಂಬುಲೆನ್ಸ್ ಗಾಜು ಒಡೆದು ದಾಂಧಲೆ ನಡೆಸಿದ್ದಾನೆ. ಈತನ ಜತೆ ಹಲವು ಮಂದಿ ಇದ್ದರು ಎಂದು ದೂರಿನಲ್ಲಿ ಮಂಜುನಾಥ್ ಉಲ್ಲೇಖಿಸಿದ್ದಾರೆ.
ಆಸ್ಪತ್ರೆಯ ಸಿಸಿ ಕ್ಯಾಮರಾ ದೃಶ್ಯಾವಳಿಯನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳ ಸುಳಿವು ಲಭ್ಯವಾಗಿದೆ. ಶೀಘ್ರದಲ್ಲಿಯೇ ಬಂಧಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಚೀನಾದ ಕೋವಿಡ್​ ನಿರೋಧಕ ಮಂಗಗಳ ಮೇಲಿನ ಪ್ರಯೋಗ ಯಶಸ್ವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
