ಬೆಂಗಳೂರು: ಕೃಷಿ ಇಲಾಖೆಯಲ್ಲಿ ವರ್ಗಾವಣೆಗೆ ಲಂಚಕ್ಕೆ ಒತ್ತಾಯಿಸಲಾಗಿದೆ ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ದೂರಿನ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ದೂರಿನ ಪತ್ರದ ಬಗ್ಗೆ ಮುಖ್ಯ ಕಾರ್ಯದರ್ಶಿಯವರ ಮೂಲಕ ತನಿಖೆ ಮಾಡಿ ವರದಿ‌ ಪಡೆಯುವಂತೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಒತ್ತಾಯಿಸಿರುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರಡ.
ಕೃಷಿ ಇಲಾಖೆಯಲ್ಲಿ ವರ್ಗಾವಣೆಗೆ ಹಣಕ್ಕೆ ಒತ್ತಾಯಿಸಲಾಗಿದೆ ಎಂದು ಮಂಡ್ಯ ಜಿಲ್ಲೆಯ ಅಧಿಕಾರಿಗಳ ಹೆಸರಿನಲ್ಲಿ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ.‌ ಕುರಿತು ರಾಜಭವನ ಸ್ಪಷ್ಟನೆ ಬಯಸಿದ ಪತ್ರ ಬಹಿರಂಗವಾಗಿದೆ.
ಇದರ ಬೆನ್ನಲ್ಲೇ ಸಚಿವರು ಪ್ರತಿಕ್ರಿಯೆ ನೀಡಿ‌, ಮಂಡ್ಯ ಜಿಲ್ಲೆಯ ಅಧಿಕಾರಿಗಳು ನೀಡಿರುವ ದೂರು ಕೊಟ್ಟಿದ್ದಾರೆ ಎಂಬುದೇ ಸತ್ಯಕ್ಕೆ ದೂರವಾಗಿದೆ. ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು ,ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ ಎಂದು ಆರೋಪಿಸಿದ್ದಾರೆ.
ನಮ್ಮ ಸರ್ಕಾರದ ಜನಪರ ಆಡಳಿತದಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಇಂತಹ ಪ್ರಯತ್ನ ಮಾಡುತ್ತಲೇ ಬಂದಿದ್ದು ಇದು ಹತಾಶೆ ಮನೋಭಾವವಾಗಿದೆ.ಈಗಾಗಲೇ ಈ‌ ಬಗ್ಗೆ ಸ್ಪಷ್ಟೀಕರಣ ನೀಡಲಾಗಿದೆ ಎಂದು ಹೇಳಿದ್ದಾರೆ.
ನಕಲಿ ದೂರುಪತ್ರ ಸೃಷ್ಟಿ ಉದ್ದೇಶ ಪೂರ್ವಕವಾಗಿ ಕೆಟ್ಟ ಹೆಸರು ತರುಲು ಮಾಡುತ್ತಿರುವ ಮುಂದುವರೆದ ಪ್ರಯತ್ನ. ಹಾಗಾಗಿಯೇ ದೂರಿನ ಬಗ್ಗೆ ಮುಖ್ಯ ಕಾರ್ಯದರ್ಶಿಯವರ ಮೂಲಕ ತನಿಖೆ ಮಾಡಿ ವರದಿ‌ ಪಡೆಯುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 10 =
Remember me
