ತುಮಕೂರು:ಇನ್ನೇನು ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ಮದುವೆ ಬೇಡ ಎಂದು ವಧುವೊಬ್ಬಳು ಹಸೆಮಣೆಯಿಂದ ಮೇಲೆದ್ದು ಹೋದ ನಾಟಕೀಯ ಪ್ರಸಂಗ ತುಮಕೂರಿನಲ್ಲಿ ನಡೆದಿದೆ.
ಕೊರಟಗೆರೆ ತಾಲೂಕಿನ ಕೊಳಾಲ ಗ್ರಾಮದಲ್ಲಿ ಘಟನೆ ನಡೆದಿದ್ದು, ಮದುವೆ ಅರ್ಧಕ್ಕೆ ಮುರಿದುಬಿದ್ದಿದೆ. ದಿವ್ಯಾ ಹೆಸರಿನ ವಧು, ತಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ಹೀಗಾಗಿ ನನಗೆ ಮದುವೆ ಬೇಡ ಎಂದು ಕಲ್ಯಾಣ ಮಂಟಪದಿಂದ ಹೊರನಡೆದಿದ್ದಾಳೆ.
ಇದನ್ನೂ ಓದಿ:ಯುವಕನ ಟ್ವೀಟ್​ಗೆ ಸ್ಪಂದಿಸಿದ ಸಿಎಂ ಕಚೇರಿ: ಕತ್ತಲಲ್ಲಿ ಬದುಕುತ್ತಿದ್ದ ವೃದ್ಧೆಯ ಮನೆಗೆ ವಿದ್ಯುತ್ ಭಾಗ್ಯ
ಕೊಳಾಲ ಗ್ರಾಮದ ಕೆ.ಸಿ.ಎನ್. ಕನ್ವೆನ್ಷನ್ ಹಾಲ್​ನಲ್ಲಿ ಇಂದು ಮದುವೆ ನಡೆಯುತ್ತಿತ್ತು. ವರ ವೆಂಕಟೇಶ್ ಜತೆ ಮದುವೆ ನಡೆಯುತ್ತಿತ್ತು. ನಿನ್ನೆ ರಾತ್ರಿ ರಿಸೆಪ್ಷನ್​ನಲ್ಲಿ ದಿವ್ಯಾ, ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದಳು. ಆದರೆ, ಇಂದು ಬೆಳಗ್ಗೆ ಮುಹೂರ್ತಕ್ಕೆ ಬರುತ್ತಿದ್ದಂತೆ ಮದುವೆ ಬೇಡ ಎಂದಿದ್ದಾಳೆ.
ವರ ವೆಂಕಟೇಶ್, ದೊಡ್ಡಬಳ್ಳಾಪುರದ ತಾಲೂಕಿನ ಮೂಡ್ಲಕಾಳೇನಹಳ್ಳಿಯ ಸಿದ್ದಮ್ಮ ಮತ್ತು ಗೋವಿಂದರಾಜು ಪುತ್ರ. ವಧು ದಿವ್ಯಾ ನೆಲಮಂಗಲ ತಾಲೂಕಿನ ದೊಡ್ಡೆಬೆಲೆ ಗ್ರಾಮದ ಅಂಜನಮ್ಮ ನರಸಿಂಹಮೂರ್ತಿ ಪುತ್ರಿ. ವಧು ಮದುವೆ ಬೇಡ ಅಂತ ಉಲ್ಟಾ ಹೊಡೆಯುತ್ತಿದ್ದಂತೆ ಕಲ್ಯಾಣ ಮಂಟಪದಲ್ಲಿ ಗದ್ದಲ ಉಂಟಾಗಿದೆ.
ಎರಡು ಕಡೆಯವರಿಂದ ಮಾತಿನ ಚಕಮಕಿ ನಡೆದಿದ್ದು, ಇದೀಗ ಈ ಪ್ರಕರಣ ಪೊಲೀಸ್​ ಠಾಣೆಯ ಮೆಟ್ಟಿಲೇರಿದೆ. ಸದ್ಯ ಕೊಳಾಲ‌ ಪೊಲೀಸ್‌ ಠಾಣೆಯಲ್ಲಿ ಮಾತುಕತೆ ನಡೆಯುತ್ತಿದೆ.(ದಿಗ್ವಿಜಯ ನ್ಯೂಸ್​)
VIDEO | ಹುಟ್ಟಿದ ತಕ್ಷಣ ಶಕ್ತಿ ಪ್ರದರ್ಶಿಸಿದ ಮಗು; ನಿಜವಾದ ಬಾಹುಬಲಿ ಎಂದ ನೆಟ್ಟಿಗರು

ದಚ್ಚು-ಕಿಚ್ಚ ಹೊಸ ಸಿನಿಮಾ: ಸ್ಯಾಂಡಲ್​​ವುಡ್​ನಲ್ಲಿ ಸಂಚಲನ ಮೂಡಿಸಿದ ಸುದ್ದಿ, ಎಲ್ಲೆಲ್ಲೂ ಇದೇ ಚರ್ಚೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one + thirteen =
Remember me
