ಬೆಂಗಳೂರು:ನಾಲ್ಕು ತಿಂಗಳ ಪರಿಶ್ರಮದಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆ ಇಲ್ಲದೆ ಕೋವಿಡ್ ರೋಗಿಗಳಿಗೆ ಸುಸಜ್ಜಿತ ಆಸ್ಪತ್ರೆ ಲಭ್ಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿ ಬಿಬಿಎಂಪಿ ವತಿಯಿಂದ ನಿರ್ಮಾಣವಾದ ‘ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದರು.
ಇದನ್ನೂ ಓದಿ;ಕೆಳಗಿಳಿಯುತ್ತಿಲ್ಲ ಕರೊನಾ; ರಾಜ್ಯದಲ್ಲೀಗ 3 ಲಕ್ಷ ದಾಟಿದ ಕೋವಿಡ್​ ರೋಗಿಗಳು; 5 ಸಾವಿರ ಸಾವು
ಬಿಬಿಎಂಪಿ ಕಟ್ಟಡ ನಾಲ್ಕು ವರ್ಷಗಳಿಂದ ಖಾಲಿ ಇತ್ತು. ಇಂತಹ ಸಂದರ್ಭದಲ್ಲಿ 20-25 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸುವ ಆಲೋಚನೆ ಬಂದಿತ್ತು. ಆದರೆ, ಕೋವಿಡ್ ಸಂಕಷ್ಟವಿದ್ದ ಹಿನ್ನೆಲೆಯಲ್ಲಿ, ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರಿಗೆ ಮನವಿ ಮಾಡಿದ್ದೆ. ಅವರು ತಕ್ಷಣ ಸ್ಪಂದಿಸಿ 11 ಕೋಟಿ ರೂ. ಮೌಲ್ಯದ ಉಪಕರಣಗಳನ್ನು ನೀಡಿದರು. ವಿಪ್ರೊ ಸಂಸ್ಥೆಯವರು ವೈದ್ಯ ಸಿಬ್ಬಂದಿ ನಿಯೋಜಿಸಿದರು. ಈ ಸಂಸ್ಥೆಗಳ ನೆರವಿನಿಂದಾಗಿ ಸರ್ಕಾರಕ್ಕೆ ಹೊರೆಯಾಗದೆ ಆಸ್ಪತ್ರೆ ನಿರ್ಮಾಣವಾಗಿದ್ದು, ಈ ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ವಸತಿ ಸಚಿವ ವಿ.ಸೋಮಣ್ಣ ಉಪಸ್ಥಿತರಿದ್ದರು.
ಚರಕ ಆಸ್ಪತ್ರೆ:ಆಸ್ಪತ್ರೆಯಲ್ಲಿ ಪುರುಷರಿಗೆ 60, ಮಹಿಳೆಯರಿಗೆ 50 ಹಾಗೂ ಮಕ್ಕಳಿಗೆ 20 ಸೇರಿ ಒಟ್ಟು 130 ಹಾಸಿಗೆಗಳಿವೆ. 20 ಐಸಿಯು ಹಾಸಿಗೆ, 20 ವೆಂಟಿಲೇಟರ್ ಸೌಲಭ್ಯವಿದೆ.
ಇದನ್ನೂ ಓದಿ;ಹಿರಿಯರು ಅಲ್ಲ, ಕಿರಿಯರೂ ಅಲ್ಲ; ಕೋವಿಡ್​ ಹರಡಲು ಇವರೇ ಕಾರಣ….!
ಕರ್ನಾಟಕದ ಕೋವಿಡ್ ಪರಿಸ್ಥಿತಿಯಲ್ಲಿ ಸುಧಾರಣೆ:ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ ಕೋವಿಡ್​ನಿಂದ ಗುಣಮುಖರಾಗಿದ್ದು, ಶೇ.1 ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ ಚೇತರಿಕೆ ಪ್ರಮಾಣ ಶೇ.70 ಇದ್ದು, ಮರಣ ಪ್ರಮಾಣ ಶೇ.1.69 ರಷ್ಟಿದೆ ಎಂದು ಸಚಿವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಅಭಿನಂದನೆ:ಶಿವಾಜಿನಗರದ ಎಚ್‍ಎಸ್‍ಐಎಸ್ ಘೋಷಾ ಆಸ್ಪತ್ರೆಯಲ್ಲಿ 17 ದಿನಗಳಲ್ಲಿ, ಕೋವಿಡ್ ಸೋಂಕಿತ 50 ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿದೆ. ಆಸ್ಪತ್ರೆ ವೈದ್ಯರಿಗೆ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ಸಲ್ಲಿಸಿದ್ದಾರೆ.
ಶುರುವಾಯ್ತು 225 ರೂ. ಬೆಲೆಯ ಕರೊನಾ ಲಸಿಕೆ ಕ್ಲಿನಿಕಲ್​ ಟ್ರಯಲ್​; ಮೈಸೂರು ಸೇರಿ 17 ಕಡೆ ಪ್ರಯೋಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
