ಬ್ಯಾಡಗಿ:22 ವರ್ಷ ವಯಸ್ಸಿನ ತಮ್ಮನನ್ನು ಅಣ್ಣನೇ ಕೊಡಲಿಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ನಾಗರಾಜ ಗುಡ್ಡಪ್ಪ ಗೊರವರ (22) ಮೃತಪಟ್ಟವ. ಈತನ ತಮ್ಮ ದಿಳ್ಳೆಪ್ಪ (20) ಆರೋಪಿ. ಮಂಗಳವಾರ ತಡರಾತ್ರಿ ನಾಗರಾಜ ಕೊಲೆಯಾಗಿದ್ದು, ಭಯಾನಕ ಘಟನೆ ಕಂಡು ಬುಡಪನಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಹೋದರನನ್ನೇ ಕೊಲ್ಲುವ ಮಟ್ಟಕ್ಕೆ ಹೋಗಿದ್ದು ಏಕೆಂದು ಆರೋಪಿ ಪೊಲೀಸರ ಬಳಿ ಬಾಯ್ಬಿಟ್ಟಿದ್ದಾನೆ.
ನಾಗರಾಜ ಮದ್ಯವ್ಯಸನಿಯಾಗಿದ್ದ. ನಿತ್ಯ ಮದ್ಯ ಸೇವಿಸಿ ಮನೆಗೆ ಬರುತ್ತಿದ್ದ ಆತ ಅಪ್ಪ-ಅಮ್ಮ ಹಾಗೂ ಕುಟುಂಬದವರಿಗೆ ಅವಾಚ್ಯವಾಗಿ ನಿಂದಿಸಿ ಹಿಂಸೆ ಕೊಡುತ್ತಿದ್ದ. ಜಗಳ ಮಾಡುತ್ತಿದ್ದ. ಸಾಕಷ್ಟು ಬಾರಿ ಮನೆಯವರು ಆತನಿಗೆ ಬುದ್ಧಿ ಹೇಳಿದರೂ ಕೇಳಿರಲಿಲ್ಲ.
ಮಂಗಳವಾರವೂ ಕುಡಿದು ಬಂದ ನಾಗರಾಜ ತಂದೆ-ತಾಯಿಗೆ ಬೈಯ್ಯುತ್ತ ಹಲ್ಲೆಗೆ ಯತ್ನಿಸಿದ್ದ. ಅಣ್ಣನ ವರ್ತನೆಗೆ ಬೇಸತ್ತ ಸಹೋದರ ದಿಳ್ಳೆಪ್ಪ, ಮನೆಯಲ್ಲಿದ್ದ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬ್ಯಾಡಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ಳಂಬೆಳಗ್ಗೆ ಪತ್ನಿ ಕಣ್ಣೆದುರಲ್ಲೇ ಗಂಡ-ಅತ್ತೆಯ ಬರ್ಬರ ಹತ್ಯೆ!

ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು, ತಲೆ-ದೇಹ ಇಬ್ಭಾಗ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
