ಹಾವೇರಿ:ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸಹೋದರರಿಬ್ಬರು ಸಾವಿಗೀಡಾಗಿದ್ದು, ಇನ್ನು ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ. ಹಾವೇರಿ ಜಿಲ್ಲೆಯ ಹಿರೆಕೇರೂರು ತಾಲೂಕಿನ ಕಚವಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.
ಇಲ್ಲಿನ ಮನೆಯೊಂದರಲ್ಲಿ 15 ದಿನಗಳ ಹಿಂದೆ ಗ್ಯಾಸ್​ ಸಿಲಿಂಡರ್​ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಐವರನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ:ಅಮ್ಮನೊಂದಿಗೆ ಜಗಳವಾಡಿ ಮನೆ ಬಿಟ್ಟು ಹೋಗಿದ್ದವ ಬಾವಿಯಲ್ಲಿ ಶವವಾಗಿ ಪತ್ತೆ!
ಹದಿನೈದು ದಿನಗಳ ಜೀವನ್ಮರಣ ಹೋರಾಟದ ಬಳಿಕ ಇಂದು ಸಹೋದರರಿಬ್ಬರು ಸಾವಿಗೀಡಾಗಿದ್ದಾರೆ. ಚಿದಂಬರ (55) ಹಾಗೂ ಸೀತಾರಾಮ್ (60) ಸಾವಿಗೀಡಾದವರು. ಚಿಂತಾಜನಕ ಪರಿಸ್ಥಿತಿಯಲ್ಲಿರುವ ಇನ್ನು ಮೂವರಿಗೆ ಚಿಕಿತ್ಸೆ ಮುಂದುವರಿದಿದೆ.
ವಿದ್ಯುತ್​ ಇಲ್ಲದ ಸಂದರ್ಭದಲ್ಲಿ ಮನೆಯಲ್ಲಿ ಮೇಣದಬತ್ತಿ ಹಚ್ಚಿಟ್ಟಿದ್ದರು. ಇದೇ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಗೊಂಡು ದುರಂತ ಸಂಭವಿಸಿತ್ತು. ಹಿರೆಕೇರೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅದರಲ್ಲಿ ಪೊಲೀಸರ ತಪ್ಪಿಲ್ಲ, ಇದರಲ್ಲಿ ತಪ್ಪಿತ್ತು..: ಸಂಚಾರ ಪೊಲೀಸರ ವಿರುದ್ಧದ ಟೀಕೆಗಳಿಗೆ ರವಿಕಾಂತೇಗೌಡ ಲಿಖಿತ ಉತ್ತರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seventeen =
Remember me
