ಬಾಗಲಕೋಟೆ:ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲುವುದರಲ್ಲಿ ಯಾವುದೇ ಅನುಮಾನ ಬೇಡ. ಒಂದು ದಿನ ಮಾತ್ರ ಪ್ರಚಾರ ಮಾಡುತ್ತೇನೆ ಎಂದಿದ್ದ ಸಿದ್ದರಾಮಯ್ಯ, ಈಗ ಕ್ಷೇತ್ರ ಬಿಟ್ಟು ಹೊರಗೆ ಬರಲಾಗದ ದುಸ್ಥಿತಿಯಲ್ಲಿ ಇದ್ದಾರೆ. ಅವರು ಬಾದಾಮಿ ಕ್ಷೇತ್ರದ ಜನರಿಗೆ ದ್ರೋಹ ಮಾಡಿ ವರುಣ ಕ್ಷೇತ್ರದಲ್ಲಿ ಚುನಾವಣಗೆ ಸ್ಪರ್ಧಿಸುತ್ತಿದ್ದಾರೆ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಕಿಡಿಕಾರಿದರು.
ಬಾದಾಮಿ ಕ್ಷೇತ್ರಕ್ಕೆ ಬಂದು, ತಿಂದು ದ್ರೋಹ ಮಾಡಿರುವ ಸಿದ್ದರಾಮಯ್ಯ ಅವರಿಗೆ ಪಾಠ ಕಲಿಸಲು ಕಾಂಗ್ರೆಸ್ ಪಕ್ಷವನ್ನು ಈ ಬಾರಿಯ ಚುನಾವಣೆಯಲ್ಲಿ ಸೋಲಿಸಿ ಎಂದು ಕ್ಷೇತ್ರದ ಮತದಾರರಿಗೆ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.
ಬಾದಾಮಿ ಕ್ಷೇತ್ರದ ಕೆರೂರ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಬಿಎಸ್​ವೈ ಮಾತನಾಡುತ್ತಾ, ಜನರಿಗೆ ದ್ರೋಹ ಮಾಡಿರುವ ಸಿದ್ದರಾಮಯ್ಯ ಅವರಿಗೆ ಬುದ್ದಿ ಕಲಿಸಲು ಬಿಜೆಪಿಯನ್ನು ಗೆಲ್ಲಿಸಿ. ಎಸ್​ಟಿ ಸಮಾಜದ ಮಹಿಳೆಯನ್ನು ದೇಶದ ರಾಷ್ಟ್ರಪತಿ ಮಾಡಿದ್ದೇವೆ. ಇದನ್ನು ಎಸ್​ಟಿ ಸಮಾಜದ ಬಂಧುಗಳು ತಿಳಿಯಬೇಕು. ವೀರೇಂದ್ರ ಪಾಟೀಲ್ ಅವರನ್ನು ವಿಮಾನ ನಿಲ್ದಾಣದಲ್ಲಿ ಸಿಎಂ ಸ್ಥಾನದಿಂದ ರಾಜೀವ ಗಾಂಧಿ ಅವರು ಕೆಳಗಿಳಿಸಿದ್ದರು. ಈ ರೀತಿಯಾಗಿ ವೀರಶೈವ ಲಿಂಗಾಯತರಿಗೆ ದ್ರೋಹ ಮಾಡಿದ್ದಾರೆ ಎಂದು ಹೇಳಿದರು.
ಬಿಜೆಪಿಯಲ್ಲಿ ಯಡಿಯೂರಪ್ಪ ಅವರಿಗೆ ಅಪಮಾನ ಮಾಡಿದ್ದಾರೆಂದು ಸಿದ್ದರಾಮಯ್ಯ ಹೇಳಿಕೊಂಡು ಬರುತ್ತಿದ್ದಾರೆ. ಕಾಂಗ್ರೆಸ್​ನ ಈ ಅಪಪ್ರಚಾರವನ್ನ ವೀರಶೈವ ಲಿಂಗಾಯತರು ನಂಬಬಾರದು. ನಾನೇ ಸ್ವತಃ ಸಿಎಂ ಸ್ಥಾನ ಬಿಟ್ಟು ಕೊಟ್ಟು ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಓಡಾಡುತ್ತಿದ್ದೇನೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಪ್ರಬಲವಾಗಿ ವೀರಶೈವ ಲಿಂಗಾಯತ, ಕುರುಬ ಸಮಾಜ ಹಾಗೂ ವಾಲ್ಮೀಕಿ ಸಮಾಜದ ಮತಬೇಟೆಗೆ ಮುಂದಾಗಿರುವ ಯಡಿಯೂರಪ್ಪ, ತಮ್ಮ ಭಾಷಣದಲ್ಲಿ ಈ ಮೂರು ಸಮಾಜಗಳನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಹೇಗೆ ಸಮಾನಾ ಆಗುತ್ತಾರೆ. ಎಲ್ಲಿಯ ಮೋದಿ, ಎಲ್ಲಿಯ ರಾಹುಲ್ ಗಾಂಧಿ ಎಂದು ಪ್ರಶ್ನಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 9 =
Remember me
