ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪಿಎ ಆಗಿದ್ದ ಎನ್.ಆರ್. ಸಂತೋಷ್ ಅವರನ್ನು ರಾಜ್ಯ ಸಚಿವರ ಸ್ಥಾನಮಾನದೊಂದಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲು ನಿರ್ಧರಿಸಲಾಗಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿದ ಆಯೋಗ
ಸಂತೋಷ್‌ಗೆ ಮನ್ನಣೆ ನೀಡಿರುವುದಕ್ಕೆ ಆರ್‌ಎಸ್‌ಎಸ್ ಮತ್ತು ನಿಷ್ಠಾವಂತ ಬಿಜೆಪಿ ಗುಂಪು ಅಪಸ್ವರ ಎತ್ತಿದೆ ಎಂದು ತಿಳಿದುಬಂದಿದೆ. ಪಕ್ಷಕ್ಕಾಗಿ ದುಡಿಯುತ್ತಿರುವವರನ್ನು ಬಿಟ್ಟು ಇವರಿಗೆ ಅವಕಾಶ ನೀಡುವುದಾದರೂ ಏಕೆ ಎಂಬ ಪ್ರಶ್ನೆ ಕೇಳಿ ಬಂದಿದೆ.
ಆಪರೇಷನ್ ಕಮಲ ವಿಚಾರದಲ್ಲಿ ಮುಂಚೂಣಿಯಲ್ಲಿದ್ದ ಸಂತೋಷ್ ಆ ನಂತರ ಬಿಎಸ್‌ವೈರಿಂದ ದೂರವಾಗಿದ್ದರು. ಯಡಿಯೂರಪ್ಪ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಲಾಗಿದೆ ಎಂದು ಹೇಳಲಾಗಿದ್ದ ಎರಡು ಪತ್ರಗಳನ್ನು ಬರೆದವರು ಸಂತೋಷ್ ಎಂದೇ ವದಂತಿಗಳು ರಾಜಕೀಯ ವಲಯದಲ್ಲಿ ಹರಿದಾಡಿದ್ದವು. ಈಗ ಮತ್ತೆ ಸಂತೋಷ್ ಸಿಎಂ ಆಪ್ತ ವಲಯ ಸೇರಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ:ಐದು ರಾಜ್ಯಗಳ ಜನರಿಗೆ ಕರ್ನಾಟಕ ಪ್ರವೇಶ ‘ನಿಷೇಧ’ ಮಾಡಿಲ್ಲ: ಮಾಧುಸ್ವಾಮಿ
ಸಂತೋಷ್ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾದರೆ ನಾಲ್ಕನೇ ರಾಜಕೀಯ ಕಾರ್ಯದರ್ಶಿಯಾಗುತ್ತಾರೆ. ಶಾಸಕರಾದ ಎಸ್.ಆರ್. ವಿಶ್ವನಾಥ್, ಎಂ.ಪಿ. ರೇಣುಕಾಚಾರ್ಯ. ಕಿಸಾನ್ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಶಂಕರಗೌಡ ಪಾಟೀಲ್ ರಾಕೀಯ ಕಾರ್ಯದರ್ಶಿಗಳಾಗಿದ್ದಾರೆ. ಪತ್ರಕರ್ತ ಎಂ.ಬಿ. ಮರಮಕಲ್ ರಾಜಕೀಯ ಸಲಹೆಗಾರರಾಗಿದ್ದಾರೆ.
ನಿಗದಿಯಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯೋದು ಪಕ್ಕಾ: ಸುರೇಶಕುಮಾರ್

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:nine + 12 =
Remember me
