ಶಿವಮೊಗ್ಗ:ಜಗತ್ತಿನಲ್ಲಿ ಸೂರ್ಯ-ಚಂದ್ರರಿರುವುದು ಎಷ್ಟು ಸತ್ಯವೋ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆಗುವುದೂ ಅಷ್ಟೇ ಸತ್ಯ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಧೂಳಿಪಟ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದರು.ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದು 28 ಕ್ಷೇತ್ರಗಳಲ್ಲಿ 28 ಸ್ಥಾನವನ್ನೂ ಬಿಜೆಪಿ-ಜೆಡಿಎಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಒಳ್ಳೆಯ ಕೆಲಸ ಮಾಡಿದ್ದಾರೆ. ರಾಘವೇಂದ್ರ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವವರು ಯೋಚನೆ ಮಾಡುವ ರೀತಿಯಲ್ಲಿ ಅವರು ಗೆದ್ದು ಬರಲಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ಜೆಡಿಎಸ್ ಪಕ್ಷದ ಜತೆಗಿನ ಹೊಂದಾಣಿಕೆ, ಪ್ರಧಾನಿ ಮೋದಿ ಅವರ ಪ್ರಭಾವ ಬಿಜೆಪಿ ಗೆಲುವಿಗೆ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.
ಗುರುವಾರದಿಂದ (ಮೇ 02) ಮತ್ತೆ ನನ್ನ ಪ್ರವಾಸ ಆರಂಭವಾಗಲಿದ್ದು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನಡ್ಡಾ ಅವರು ಪ್ರಚಾರಕ್ಕೆ ಬರುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಚಾರ ನಡೆಸುತ್ತಿದ್ದಾರೆ. ಇವೆಲ್ಲದರ ಪರಿಣಾಮ 28ಕ್ಕೆ 28 ಕ್ಷೇತ್ರಗಳಲ್ಲಿ ಗೆಲ್ಲುವ ನಮ್ಮ ಸಂಕಲ್ಪದಲ್ಲಿ ಯಶಸ್ವಿ ಆಗುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four + five =
Remember me
