ಆನೇಕಲ್:‘‘ಯಡಿಯೂರಪ್ಪ ಅವರು ಒಬ್ಬ ಸಮರ್ಥ ನಾಯಕರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪನವರೇ ಕಾರಣ’’ ಎಂದು ರಾಜ್ಯ ಕಾಂಗ್ರೆಸ್‌ನ ಕಾರ‌್ಯಾಧ್ಯಕ್ಷ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಮಂಗಳವಾರ ಮುಕ್ತಕಂಠದಿಂದ ಪ್ರಶಂಸೆ ಮಾಡಿದ್ದಾರೆ.
ಬನ್ನೇರುಘಟ್ಟ ಸಮೀಪದ ಕಾಳೇನ ಅಗ್ರಹಾರದಲ್ಲಿ ಕಾಂಗ್ರೆಸ್ ಯುವ ಘಟಕದಿಂದ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ವೈದ್ಯರು, ನರ್ಸ್‌ಗಳು, ಆಶಾ ಕಾರ್ಯಕರ್ತೆಯರಿಗೆ ಅಭಿನಂದನೆ ಸಲ್ಲಿಸಿ, ಫುಡ್‌ಕಿಟ್‌ಗಳನ್ನು ವಿತರಣೆ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘‘ಯಡಿಯೂರಪ್ಪ ಮೊದಲಿನಿಂದಲೂ ಬಿಜೆಪಿಯನ್ನು ಕಟ್ಟಿ ಬೆಳೆಸಿದ ನಾಯಕ’’ ಎಂದು ಹೇಳಿ ಅಚ್ಚರಿ ಮೂಡಿಸಿದರು.
‘‘ರಾಜ್ಯದ ಹಿರಿಯ ನಾಯಕರೊಬ್ಬರು ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವುದಕ್ಕೆ ಪಟ್ಟು ಹಿಡಿದು ರಾಜಕೀಯ ಮಾಡುತ್ತಿದ್ದಾರೆ. ಇದು ಅವರ ಪಕ್ಷದ ಆಂತರಿಕ ವಿಚಾರ ನಿಜ. ಆದರೆ ಯಡಿಯೂರಪ್ಪ ಅವರು ಸಮರ್ಥ ನಾಯಕರು. ಬಿಜೆಪಿಯನ್ನು ಕಟ್ಟಿ ಬೆಳೆಸಿದವರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪನವರೇ ಕಾರಣ. ಹಿಂದೊಮ್ಮೆ ಅವರು ಪಕ್ಷವನ್ನೇ ಬಿಟ್ಟು ಹೋಗಿ ಬೇರೆ ಪಕ್ಷ ಕಟ್ಟಿದರೂ ಅವರು ಮೂಲತಃ ಬಿಜೆಪಿಯವರೇ. ಅಷ್ಟೇ ಅಲ್ಲ, ಯಡಿಯೂರಪ್ಪ ಅವರು ಮೃದುಸ್ವಭಾವದ ನಾಯಕ’’ ಎಂದು ರಾಮಲಿಂಗಾರೆಡ್ಡಿ ಹೊಗಳಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಬಿಜೆಪಿಯ ಕೆಲವು ಶಾಸಕರೇ ಹೇಳಿಕೆಗಳನ್ನು ನೀಡುತ್ತಿರುವ ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರೊಬ್ಬರು ಮುಖ್ಯಮಂತ್ರಿಯನ್ನು ಪ್ರಶಂಸಿಸಿರುವುದು ಅದರ ಹಿಂದಿನ ಕಾರಣದ ಕುರಿತು ಕುತೂಹಲ ಮೂಡುವಂತೆ ಮಾಡಿದೆ.
ಬ್ರಾಹ್ಮಣ ಸಮುದಾಯದ ವಿರುದ್ಧ ಹೇಳಿಕೆ: ವಿಚಾರಣೆಗೆ ಹಾಜರಾಗಲು ನಟ ಚೇತನ್​ಗೆ ನೋಟಿಸ್​ ಜಾರಿ

ಈ ಸರಣಿಯ 2 ರೂಪಾಯಿ ನಾಣ್ಯಗಳಿದ್ದರೆ ನೀವಾಗಬಹುದು ಲಕ್ಷಾಧಿಪತಿ?!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 11 =
Remember me
