ಶಿವಮೊಗ್ಗ:ಇನ್ನೂ ಒಂದು ವಾರ ಲಾಕ್​ಡೌನ್​ ವಿಸ್ತರಿಸಿರುವುದರಿಂದ ಕರೊನಾ ಸೋಂಕು ಹತೋಟಿಗೆ ಬರುತ್ತದೆ ಎಂಬ ವಿಶ್ವಾಸ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಹೇಳಿದರು.
ಶಿಕಾರಿಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರೋನಾ ಕನಿಷ್ಠ ಶೇ.5ರಷ್ಟು ಪಾಸಿಟಿವಿಟಿ ರೇಟ್ ಬರಬೇಕು ಎಂಬುದು ನಮ್ಮ ಅಪೇಕ್ಷೆ. ಆದರೆ ಶಿವಮೊಗ್ಗ ಸೇರಿದಂತೆ ಶಿಕಾರಿಪುರದಲ್ಲಿ ಕೋವಿಡ್ ಜಾಸ್ತಿ ಪ್ರಮಾಣದಲ್ಲಿದೆ. ಅದನ್ನು ತಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಲಾಕ್​ಡೌನ್ ಇನ್ನೂ ಒಂದು ವಾರ ವಿಸ್ತರಿಸಿರುವುದರಿಂದ ಕೋವಿಡ್ ಹತೋಟಿಗೆ ಬರುತ್ತದೆ ಎಂಬ ವಿಶ್ವಾಸ ಇದೆ. ಇದಕ್ಕೆ ಜನ ಸಹಕಾರ ಕೊಡಬೇಕು. ಇನ್ನೊಂದು ವಾರದಲ್ಲಿ ಪಾಸಿಟಿವಿಟಿ ರೇಟ್ ಶೇ.5ಕ್ಕೆ ಬರುತ್ತದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.
ಕಳೆದ ಎಂಟು ತಿಂಗಳಿಂದ ಆದಾಯ ಕುಸಿತವಾಗಿದೆ. ತೆರಿಗೆ ಸಂಗ್ರಹ ಕಡಿಮೆ ಆಗಿದೆ. ಇದರ ನಡುವೆಯೂ ಅಭಿವೃದ್ಧಿ ಕಾರ್ಯಕ್ಕೆ, ನೀರಾವರಿ ಯೋಜನೆಗೆ ಹಣಕಾಸಿನ ಧಕ್ಕೆ ಆಗದಂತೆ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇನೆ. ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಹಣಕಾಸು ನೆರವಿಗೆ ಮನವಿ ಮಾಡಿದ್ದೇನೆ. ನಾಲ್ಕು ತಿಂಗಳು ಕಳೆದರೆ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಈಗಾಗಲೇ ಬಡವರಿಗೆ ತಲುಪುವಂತಹ ಎರಡು ಪ್ಯಾಕೇಜ್ ನೀಡಲಾಗಿದೆ. ಮುಂದೆ ಅನಿವಾರ್ಯ ಆದರೆ ಮತ್ತೊಂದು ಪ್ಯಾಕೇಜ್ ಬಗ್ಗೆ ಚಿಂತನೆ ಮಾಡಲಾಗುವುದೆಂದು ಹೇಳಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲಿಯಂ ದರ ಜಾಸ್ತಿಯಾಗಿದೆ ಎನ್ನುವ ಮೂಲಕ ಇಂಧನ ದರ ಏರಿಕೆಯನ್ನು ಸಮರ್ಥಿಸಿಕೊಂಡರು. ಕಾಂಗ್ರೆಸ್​ನವರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಲಾರೆ. ಎಲ್ಲಾ ಪಕ್ಷಗಳು ಈ ಸಂದರ್ಭದಲ್ಲಿ ಸಹಕಾರ ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಮುಂದಾಲೋಚನೆಯಿಂದ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನವರು ರಾಜಕಾರಣ ಮಾಡದೆ ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು.
ನಾಳೆ, ನಾಡಿದ್ದರಲ್ಲಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನ್ ಬರಲಿದೆ. ಎಲ್ಲಾ ಜಿಲ್ಲೆಗೂ ಜನಸಂಖ್ಯೆಗೆ ಅನುಗುಣವಾಗಿ ವ್ಯಾಕ್ಸಿನ್ ಸಿಗಲಿದೆ. ಜೂನ್ 17, 18ರ ನಂತರ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಸಹಜವಾಗಿಯೇ ರಾಜ್ಯಕ್ಕೆ ಬರಲಿದ್ದಾರೆ. ಅರುಣ್ ಸಿಂಗ್ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದರು.(ದಿಗ್ವಿಜಯ ನ್ಯೂಸ್​)
ಕರೊನಾದಿಂದ ಕವಿ ಡಾ. ಸಿದ್ದಲಿಂಗಯ್ಯ ವಿಧಿವಶ: ಕಳಚಿತು ಸಾಹಿತ್ಯ ಲೋಕದ ಮತ್ತೊಂದು ಕೊಂಡಿ
ವಿಕ್ರಾಂತ್ ರೋಣನ ಬಗ್ಗೆ ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತಹ ಸುದ್ದಿ ನೀಡಿದ ರವಿಶಂಕರ್​ ಗೌಡ!
ನಟ ಅನುಪಮ್‌ ಖೇರ್‌ಗೆ ಬಿಗ್‌ ಶಾಕ್‌… ರಾತ್ರೋರಾತ್ರಿ 80 ಸಾವಿರ ಫಾಲೋವರ್ಸ್‌ ಮಿಸ್ಸಿಂಗ್‌!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 + 5 =
Remember me
