ಬೆಂಗಳೂರು:ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಯಲ್ಲಿದೆ. ಯಡಿಯೂರಪ್ಪ ಅವರು ಸಿಎಂ ಕುರ್ಚಿಯಿಂದ ಕೆಳಗಿಳಿಯಬಾರದು ಎಂದು ಅನೇಕರು ಹೇಳುತ್ತಿದ್ದರೆ, ಬೇರೆಯವರಿಗೆ ಅವಕಾಶ ಸಿಗಬೇಕು ಎನ್ನುವ ಮಾತುಗಳೂ ಕೇಳಿಬರುತ್ತಿವೆ.
ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಮತ್ತು ಜನರ ಪ್ರತಿಕ್ರಿಯೆಗಳನ್ನು ಗಮನಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನರಲ್ಲಿ ಮನವಿ ಮಾಡಿದ್ದಾರೆ. “ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು.” ಎಂದು ಅವರು ಟ್ವೀಟ್ ಮಾಡಿದ್ದಾರೆ.
ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು.ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ
— B.S.Yediyurappa (@BSYBJP)July 21, 2021

ಪಕ್ಷ ನನಗೆ ಮಾತೃ ಸಮಾನ. ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಅವರು ಟ್ವೀಟ್​ನಲ್ಲಿ ತಿಳಿಸಿದ್ದಾರೆ. (ಏಜೆನ್ಸೀಸ್)
17 ನಗರಗಳ 217 ಸ್ಥಳಗಳಲ್ಲಿ ಉಚಿತ ವೈಫೈ ನೀಡಲು ಸಿದ್ಧವಾದ ಸರ್ಕಾರ

ರಾಜ್ಯದಲ್ಲಿಂದು 1,639 ಕರೊನಾ ಕೇಸ್ ಪತ್ತೆ; ಬೀದರ್ & ಯಾದಗಿರಿಯಲ್ಲಿ ಶೂನ್ಯ ಪ್ರಕರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + eighteen =
Remember me
