ಬೆಂಗಳೂರು:79ನೇ ವಸಂತಕ್ಕೆ ಕಾಲಿಟ್ಟ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ರಾಜ್ಯಾದ್ಯಂತ ಬಿಎಸ್​ವೈ ಹೆಸರಿನಲ್ಲಿ ಅವರ ಅಭಿಮಾನಿಗಳು ಪೂಜೆ, ಹೋಮ ಮಾಡಿಸಿ ನೆಚ್ಚಿನ ನಾಯಕ ಆಯಸ್ಸು-ಆರೋಗ್ಯ ವೃದ್ಧಿಸಲೆಂದು ಪ್ರಾರ್ಥಿಸುತ್ತಿದ್ದಾರೆ. ಫೋನ್ ಮತ್ತು ಟ್ವೀಟ್ ಮೂಲಕ ರಾಷ್ಟ್ರಪತಿ ರಾಮನಾಥ ಕೋವಿಂದ ಹಾಗೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಗಣ್ಯರು ಬಿಎಸ್​ವೈಗೆ ಶುಭ ಕೋರಿದ್ದಾರೆ.
‘ಯಡಿಯೂರಪ್ಪ ಅವರು ಅನುಭವಿ ಆಡಳಿತಗಾರ. ಬಡವರ, ರೈತರ ಪಾಲಿನ ಆಶಾಕಿರಣ ಬಿಎಸ್​ವೈ. ದೇವರು ಆಯುರಾರೋಗ್ಯ ಕರುಣಿಸಲಿ’ ಎಂದು ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.
‘ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ ಕರುಣಿಸಿ ಜನಸೇವೆ ಮಾಡಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ’ ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ತಿಳಿಸಿದ್ದಾರೆ.
Greetings to Karnataka CM@BSYBJPJi on his birthday. Yediyurappa Ji is one of our most experienced leaders, who has devoted his life towards the welfare of farmers and empowering the poor. Praying for his long and healthy life.
— Narendra Modi (@narendramodi)February 27, 2021

ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಮಹಾವೀರನ ವಿಗ್ರಹ ಹಾಗೂ ಪ್ರಸಾದವನ್ನು ಸಿಎಂ ಬಿಎಸ್‌ವೈಗೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲದೆ ಕುಟುಂಬಸ್ಥರು ಸಿಎಂಗೆ ಆರತಿ ಬೆಳಗಿ ಆಶೀರ್ವಾದ ಪಡೆಯುವ ಮೂಲಕ ಹುಟ್ಟುಹಬ್ಬದ ಶುಭ ಕೋರಿದರು. ಕಾವೇರಿ ನಿವಾಸಕ್ಕೆ ಬೆಳಗ್ಗೆಯೇ ಆಗಮಿಸಿದ ನಳೀನ್ ಕುಮಾರ್ ಕಟೀಲ್, ಆರ್.ಅಶೋಕ್, ಉಮೇಶ್ ಕತ್ತಿ, ಪಿ.ಸಿ. ಮೋಹನ್, ನಟ ಜಗ್ಗೇಶ್, ಹೊಳಲ್ಕೆರೆ ಶಾಸಕ ಚಂದ್ರಪ್ಪ, ಈರಣ್ಣ ಕಡಾಡಿ, ರಾಜ್ಯ ಬಿಜೆಪಿ ರೈತ ಮೋರ್ಚಾ ನಿಯೋಗ ಹಾಗೂ ಶಾಸಕರು ತಮ್ಮ ನಾಯಕನಿಗೆ ಜನ್ಮದಿನ ಶುಭಾಶಯ ತಿಳಿಸಿದರು.
‘ರಾಜ್ಯದ ಮುಖ್ಯಮಂತ್ರಿ, ರಾಜಕೀಯ ಮುತ್ಸದ್ಧಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರಾಜ್ಯದ ಜನರ, ರೈತ ಬಂಧುಗಳ, ದುರ್ಬಲರ ಆಶೋತ್ತರಗಳಿಗಾಗಿ ದುಡಿಯಲು ಭಗವಂತ ತಮಗೆ ಎಲ್ಲ ರೀತಿಯ ಶಕ್ತಿ ನೀಡಲಿ, ಆಯುರಾರೋಗ್ಯ ಕರುಣಿಸಲಿ’ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.
ಯಡಿಯೂರಪ್ಪರ ಜನ್ಮ ದಿನದ ಅಂಗವಾಗಿ ಶಿವಮೊಗ್ಗದಲ್ಲೂ ವಿಶೇಷ ಪೂಜೆ ನಡೆದಿದೆ. ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಎಂಎಲ್​ಸಿ ಎಸ್.ರುದ್ರೇಗೌಡ ಭಾಗವಹಿಸಿದ್ದರು.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಕೆಆರ್​ಎಸ್​ ಡ್ಯಾಂ ಮೇಲೆ ನಿಷೇಧವಿದ್ದರೂ ಪೊಲೀಸ್​ ಜೀಪ್​ನಲ್ಲೇ ದರ್ಬಾರ್​ ನಡೆಸಿದ ಯುವಕ!

ನೀವು ಶಾಸಕರಾದ್ರೆ ನಮಗೇನ್ರಿ? ಸುಮ್ಮನೆ ಹಣ ಕಟ್ಟಿ… ಶಾಸಕನಿಗೆ ಟೋಲ್​ ಸಿಬ್ಬಂದಿ ಧಮ್ಕಿ!

ಪ್ರೊ.ಭಗವಾನ್​ ಮುಖಕ್ಕೆ ಮಸಿ ಬಳಿದಿದ್ದ ವಕೀಲೆ ಮೀರಾಗೆ ಸಂಕಷ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 15 =
Remember me
