ಶಿವಮೊಗ್ಗ:ಸಿಎಂ ಬದಲಾವಣೆ ಮತ್ತು ಬಿಎಸ್​ವೈ ಸಂಪುಟ ಸರ್ಜರಿ ವಿಚಾರದಲ್ಲಿ ಅಂತೆ-ಕಂತೆ ಸುದ್ದಿಗಳೇ ಹೆಚ್ಚಾಗಿ ಸದ್ದು ಮಾಡುತ್ತಿವೆ. ಬಿಜೆಪಿ ಕಾರ್ಯಕಾರಿಣಿ ಸಭೆ ಮುಗಿದ ಬಳಿಕ ಬಿ.ಎಸ್​.ಯಡಿಯೂರಪ್ಪರ ಸಿಎಂ ಸ್ಥಾನಕ್ಕೆ ಕುತ್ತು ಬರಲಿದೆ ಎಂದು ಹರಡಿದ್ದ ಸುದ್ದಿ ಚರ್ಚೆಗೆ ಗ್ರಾಸವಾಗಿತ್ತು. ಈ ಊಹಾಪೋಹಕ್ಕೆಲ್ಲ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆದಿದ್ದಾರೆ.
ಬಿಜೆಪಿ ಕಾರ್ಯಕಾರಿಣಿ ಸಭೆ ಮುಗಿಯುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯೇ ಆಗಿಲ್ಲ. ಇದು ಸಿಎಂ ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟದ್ದು ಎಂದರು.ಇದನ್ನೂ ಓದಿರಿಎನ್​ಡಿಎ ಜತೆ ಜೆಡಿಎಸ್​ ವಿಲೀನ: ಬಿಜೆಪಿ ವಿರುದ್ಧ ಕುಮಾರಸ್ವಾಮಿ ಆಕ್ರೋಶ ಸ್ಫೋಟ
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅರುಣ್ ಸಿಂಗ್, ಲೀಡರ್​ಶಿಫ್ ಬದಲಾವಣೆ ಅನಗತ್ಯ ಚರ್ಚೆ. ಯಡಿಯೂರಪ್ಪ ಅವರೇ ರಾಜ್ಯದ ನಾಯಕರು, ಅವರೇ ಸಿಎಂ. ಪಕ್ಷದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿಎಂ ಯಡಿಯೂರಪ್ಪ ಅವರೇ ಸುಪ್ರೀಂ, ಸಂಪುಟ ಸರ್ಜರಿ ಬಗ್ಗೆ ಅವರೇ ತೀರ್ಮಾನ ತೆಗೆದುಕೊಳ್ತಾರೆ ಎಂದು ಘೋಷಿಸಿದರು.
ಇನ್ನು ಯತ್ನಾಳ್​ ಹೇಳಿಕೆ ಬಗ್ಗೆ ಮಾತನಾಡಿದ ಅರುಣ್​ ಸಿಂಗ್​, Who is ಯತ್ನಾಳ್… ಯತ್ನಾಳ್ ಯಾರು? ಅವರ ಹೇಳಿಕೆ ಬಗ್ಗೆ ಕೇಂದ್ರ ಶಿಸ್ತು ಸಮಿತಿ ಗಮಹನಹರಿಸುತ್ತಿದೆ ಎಂದು ಗರಂ ಆದರು.
24ರ ಯುವತಿ ಜತೆ ಮದುವೆಯಾಗಿ ಖುಷಿಯಾಗಿದ್ದ ಬೆನ್ನಲ್ಲೇ 54ರ ಫಾಸ್ಟರ್​ಗೆ ಶಾಕ್​!

ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ 5 ವರ್ಷವಲ್ಲ! ಮತ್ತೆಷ್ಟು ಗೊತ್ತಾ?

ವರ್ಷಾಚರಣೆಗೆ ಕೇಕ್​ ಕತ್ತರಿಸುತ್ತಿದ್ದ ಯುವಕರ ಹಿಂದೆಯೇ ಹಾದುಹೋದ ದೆವ್ವ! ಭಯಾನಕ ವಿಡಿಯೋ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 10 =
Remember me
