
ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಕೂಡದು ಎಂದು ಹೈಕೋರ್ಟ್ ಆದೇಶ ನೀಡಿರುವುದನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿ, ಪೋಕ್ಸೊ ಕೇಸಿನಡಿ ಯಡಿಯೂರಪ್ಪ ಅವರಿಗೆ 82 ವರ್ಷವಾಗಿದೆ. ಅವರು ಓಡಿ ಹೋಗುವ ವ್ಯಕ್ತಿ ಅಲ್ಲ. 4 ಬಾರಿ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ ದೊಡ್ಡ ಜನನಾಯಕ. ಅದೆಲ್ಲ ಇತಿಹಾಸವನ್ನು ಗಮನಿಸಿ ಈ ಆದೇಶ ನೀಡಿದ್ದಾಗಿ ವಿಶ್ಲೇಷಿಸಿದರು.ಕೇಸನ್ನು ದಾಖಲಿಸಿದ ಮಹಿಳೆ ಯಡಿಯೂರಪ್ಪ ಅವರಿಗೆ ಕೆಟ್ಟ ಹೆಸರು ತರಲು ಮತ್ತು ದ್ವೇಷದ ರಾಜಕಾರಣ ಮಾಡಲು ಉದ್ದೇಶಿಸಿದ್ದರು. ಇವುಗಳನ್ನು ಗಮನಿಸಿದ ಹೈಕೋರ್ಟ ಆದೇಶ ನೀಡಿದೆ. ಇದು ಯಡಿಯೂರಪ್ಪನವರ ದೀರ್ಘ ಹೋರಾಟಕ್ಕೆ ಸಿಕ್ಕಿದ ಜಯ ಎಂದರು.3 ತಿಂಗಳ ಕಾಲ ಏನೂ ಚಟುವಟಿಕೆ ನಡೆಸದವರು, ಚಾರ್ಜ್ಶೀಟ್ ಮಾಡದವರು, ಈಗ ರಾಹುಲ್ ಗಾಂಧಿ ಮತ್ತು ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದು ಹೋದ ಮೇಲೆ ಏಕಾಏಕಿ ಅವರನ್ನು ಬಂಧಿಸಲು ಸರ್ಕಾರ ಮುಂದಾಗಿತ್ತು. ತನ್ನ ಹುಳುಕುಗಳನ್ನು ಮುಚ್ಚಿಹಾಕಲು ಈ ಷಡ್ಯಂತ್ರ ಮಾಡಿತ್ತು ಎಂಬುದಕ್ಕೆ ಯಾವುದೇ ಅನುಮಾನ ಬೇಡ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 13 =
Remember me
