ಬೆಂಗಳೂರು :ಗ್ರಾಹಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹಿಸಿ ವಂಚಿಸಿದ ಐಎಂಎನಂತಹ ಪ್ರಕರಣಗಳು ರಾಜ್ಯದಲ್ಲಿ ಮರುಕಳಿಸದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆ ಕರ್ನಾಟಕ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ನಿಯಮಗಳು- 2020ಕ್ಕೆ ಅನುಮೋದನೆ ನೀಡಿದೆ.
2019ರಲ್ಲಿ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೊಳಿಸಿದ್ದ ಕೇಂದ್ರ ಸರ್ಕಾರ ಈ ಬಗ್ಗೆ ನಿಯಮ ರೂಪಿಸುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ನಿಯಮಗಳನ್ನು ರಚಿಸಿದೆ. ಈ ಕಾಯ್ದೆಯನ್ವಯ, ಸ್ವಸಹಾಯ ಗುಂಪುಗಳ ಖಾತೆಗಳಲ್ಲಿ ಒಂದು ಬಾರಿಗೆ ಗರಿಷ್ಠ 10 ಲಕ್ಷ ರೂ.ವರೆಗೆ ಜಮೆ ಮಾಡಲು ಅನುಮತಿ ನೀಡಬಹುದಾಗಿದೆ.
ಸಕ್ಷಮ ಪ್ರಾಧಿಕಾರ :ಅನಿಯಂತ್ರಿತ ಠೇವಣಿ ವಿಚಾರದಲ್ಲಿ ಕಾರ್ಯದರ್ಶಿ ದರ್ಜೆಗೆ ಕಡಿಮೆ ಇಲ್ಲದ ಒಬ್ಬ ಅಧಿಕಾರಿ ಅಥವಾ ಅದಕ್ಕಿಂತ ಉನ್ನತ ಅಧಿಕಾರಿಯನ್ನು ಸಕ್ಷಮ ಪ್ರಾಧಿಕಾರಿಯಾಗಿ ನೇಮಿಸಬಹುದಾಗಿದೆ. ಕಾನೂನು ಉಲ್ಲಂಘನೆಗೆ ಕೇಂದ್ರ ಸರ್ಕಾರ ನಿಗದಿಪಡಿಸುವ ಶಿಕ್ಷೆಗಳು ಅನ್ವಯಗೊಳ್ಳಲಿವೆ.
ಅಭಿಪ್ರಾಯ ಸಂಗ್ರಹ :ಈ ಕರಡು ಸಿದ್ಧಪಡಿಸುವ ಮುನ್ನ ಆರ್ಥಿಕ ಇಲಾಖೆ ಕಾನೂನು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ನಬಾರ್ಡ್ ಸೇರಿದಂತೆ ವಿವಿಧ ಇಲಾಖೆಗಳಿಂದ ಅಭಿಪ್ರಾಯ ಸಂಗ್ರಹಿಸಿತ್ತು. ಆ ಎಲ್ಲ ಸಲಹೆಗಳನ್ನು ಕ್ರೋಡೀಕರಿಸಿ ಕರಡಿನಲ್ಲಿ ಅಂತರ್ಗತ ಮಾಡಲಾಗಿದೆ. ಈ ಕರಡು ನಿಯಮಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಅನುಮೋದನೆ ಪಡೆಯಲಾಗುತ್ತದೆ.
ಬಿಹಾರ ಚುನಾವಣೆ: ಬಿಜೆಪಿ ಪ್ರಣಾಳಿಕೆ-19 ಲಕ್ಷ ಉದ್ಯೋಗ, ಉಚಿತ ಲಸಿಕೆ, ಜೆಡಿಯು ಪ್ರಣಾಳಿಕೆ- ಸಾಥ್ ನಿಶ್ಚಯ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
