ಬೆಂಗಳೂರು: 4ನೇ ಶನಿವಾರದ ರಜೆ ಅನ್ವಯ ಆಗದೆ ಇರುವ ಸರ್ಕಾರಿ ನೌಕರರಿಗೆ 15 ಸಿಎಲ್ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಸಭೆಯ ನಂತರ ಸುದ್ದಿಗಾರರಿಗೆ ವಿವರ ನೀಡಿದ ಸಚಿವ ಜೆ.ಸಿ. ಮಾಧುಸ್ವಾಮಿ, ನಾಲ್ಕನೇ ಶನಿವಾರ ಸರ್ಕಾರಿ ರಜೆ ಘೋಷಿಸಿದ್ದ ಹಿನ್ನೆಲೆಯಲ್ಲಿ ಸಿಎಲ್​ಗಳ ಸಂಖ್ಯೆಯನ್ನು 10ಕ್ಕೆ ಇಳಿಸಲಾಗಿತ್ತು. ರಜೆ ಅನ್ವಯವಾಗದ ಇಲಾಖೆಗಳಲ್ಲಿ ಸಿಎಲ್ ಹೆಚ್ಚಳಕ್ಕೆ ಬೇಡಿಕೆ ಇತ್ತು ಎಂದರು. ಕಾರ್ವಿುಕ ಇಲಾಖೆ ಕಾರ್ವಿುಕ ಸೇವೆಗಳ (ವೃಂದ ಮತ್ತು ನೇಮಕಾತಿ)ನಿಯಮಗಳು-2019ಕ್ಕೆ ಅನುಮೋದನೆ ನೀಡಲಾಗಿದೆ. ವಸತಿ ರಹಿತರಿಗೆ ವಸತಿ ಕಲ್ಪಿಸಲು ಚಿಕ್ಕಬಳ್ಳಾಪುರ ಜಿಲ್ಲೆ ಕಸಬಾ ಹೋಬಳಿ ಮರಳುಕುಂಟೆಯಲ್ಲಿ 61 ಎಕರೆ, ಆವುಲಹಳ್ಳಿಯಲ್ಲಿ 10 ಎಕರೆ ಸೇರಿ 71 ಎಕರೆಗೆ ಭೂ ಕಂದಾಯ ಕಾಯ್ದೆಯಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದರು.
ಶಿವಮೊಗ್ಗಕ್ಕೆ 220 ಕೋಟಿ:ಮುಖ್ಯಮಂತ್ರಿಗಳ ತವರು ಜಿಲ್ಲೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 220 ಕೋಟಿ ರೂ. ಅನುದಾನ ಮಂಜೂರಿಗೆ ಸಂಪುಟ ಒಪ್ಪಿಗೆ ನೀಡಿದೆ. ವಿಮಾನ ನಿಲ್ದಾಣ ಕಾಮಗಾರಿ ಬಗ್ಗೆ ಮೇ.ರೈಟ್ಸ್ ಸಂಸ್ಥೆ ಸಲ್ಲಿಸಿರುವ ಕಾನ್ಸೆಪ್ಟ್ ನೋಟ್ಸ್ ಹಿನ್ನಲೆಯಲ್ಲಿ ಅನುಮೋದನೆ ನೀಡಲಾಗಿದೆ.
ಉಚಿತ ಅಕ್ಕಿ ಮತ್ತು ಗೋಧಿ:ಸಿದ್ಧಗಂಗಾ ಮಠ ಸೇರಿ 350 ಕಲ್ಯಾಣ ಸಂಸ್ಥೆಗಳಿಗೆ ದಾಸೋಹ ಯೋಜನೆಯಲ್ಲಿ 1 ವರ್ಷ ಕಾಲ ಉಚಿತವಾಗಿ ಅಕ್ಕಿ ಮತ್ತು ಗೋಧಿಯನ್ನು ನೀಡಲು ಮಂಗಳವಾರ ಮುಖ್ಯಮಂತ್ರಿಗಳ ಸಚಿವ ಸಂಪುಟ ಒಪ್ಪಿದೆ. ಈ ತೀರ್ವನದಿಂದ 32,700 ಮಕ್ಕಳಿಗೆ ಅನುಕೂಲ ವಾಗಲಿದೆ ಎಂದು ಮಾಧುಸ್ವಾಮಿ ತಿಳಿಸಿದರು.
ಪ್ರಮುಖ ತೀರ್ಮಾನಗಳು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + fourteen =
Remember me
