ಬೆಂಗಳೂರು: ವಿವಿಧ ಚಳವಳಿ ಮತ್ತು ಪ್ರತಿಭಟನೆ ಸಂದರ್ಭದಲ್ಲಿ ಹೂಡಲಾಗಿದ್ದ 51 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಒಪ್ಪಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮಾಹಿತಿ ನೀಡಿದರು.
ಮಂಡ್ಯ ಜಿಲ್ಲೆಯಲ್ಲಿ ನಡೆದ ಚಳವಳಿ ಸಂದರ್ಭದಲ್ಲಿ ರೈತ ನಾಯಕ ಮಾದೇಗೌಡ ಸೇರಿ ಹಲವರ ಮೇಲೆ ಹಾಕಲಾಗಿದ್ದ 35 ಪ್ರಕರಣ, ಹಾಸನ ಜಿಲ್ಲೆ ಹಳೇಬೀಡು-ಮಾದಿಹಳ್ಳಿ ನೀರಾವರಿ ಯೋಜನೆಗಾಗಿ 2017ರಲ್ಲಿ ಪುಷ್ಪಗಿರಿ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಸಂಬಂಧ ಹಾಕಲಾಗಿದ್ದ ಪ್ರಕರಣ, ಬೆಳಗಾವಿ ಜಿಲ್ಲೆಯ ಕಳಸ ಬಂಡೂರಿ ಯೋಜನೆ ಚಳವಳಿಗಾರರು, ರೈತ ಸಂಘದ ಮೇಲಿನ ಪ್ರಕರಣ, ಕೊಪ್ಪಳ ಮತ್ತು ಕಲಬುರಗಿ ರಾಷ್ಟ್ರೀಯ ಹೆದ್ದಾರಿ ಮೇಲಿನ ಪ್ರತಿಭಟನೆ ಪ್ರಕರಣ, ಮೈಸೂರು, ಯಾದಗಿರಿ ಪ್ರಕರಣ ಸೇರಿ 51 ಪ್ರಕರಣ ವಾಪಸ್ ಪಡೆಯಲಾಗಿದೆ ಎಂದರು. ಹಾವೇರಿ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿದ್ದ ಪ್ರಕರಣದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ನಿರಂಜನ ಹೆರೂರು ಮತ್ತು ಶಿವರಾಜ ಸಜ್ಜನ್ ಮೇಲಿದ್ದ ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ.
ಕೇಸು ಮುಂದುವರಿಕೆ: ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧ ನಕಲಿ ಸಿಡಿ ಮಾಡಿ ಅಪಪ್ರಚಾರ ಮಾಡಲು ಪ್ರಯತ್ನಿಸಿದ್ದ ಪ್ರಕರಣವನ್ನು ಹಿಂಪಡೆಯಲು ಹಿಂದಿನ ಸರ್ಕಾರ ತೆಗೆದುಕೊಂಡಿದ್ದ ತೀರ್ವನವನ್ನು ರದ್ದು ಮಾಡಲಾಗಿದ್ದು, ಪ್ರಕರಣವನ್ನು ಮುಂದುವರಿಸಿ ಚಾರ್ಜ್​ಶೀಟ್ ಸಲ್ಲಿಸಲು ಒಪ್ಪಿಗೆ ನೀಡಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − 6 =
Remember me
