
ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ ರಿಪೋರ್ಟ್ ಹಾಕುವ ಹಂತದಲ್ಲಿದ್ದ ಪೋಕ್ಸ್ ಪ್ರಕರಣಕ್ಕೆ ಏಕಾಏಕಿ ಸರ್ಕಾರ ಮರುಜೀವ ನೀಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.ಕಳೆದ 3 ತಿಂಗಳ ಕಾಲ ಇಲ್ಲದ ಜೀವ ಈಗ ಯಾಕೆ ಬಂತು? ಈ ಕೇಸಿನ ಮೇಲೆ ಪರಕಾಯ ಪ್ರವೇಶ ಮಾಡಿದವರು ಯಾರು? ದೂರುದಾರು ಇದೇ ರೀತಿ 50ಕ್ಕೂ ಹೆಚ್ಚು ಗಣ್ಯರ ಮೇಲೆ ದೂರು ನೀಡಿರುವ ಕಾರಣ ಸ್ವಲ್ಪ ಮಾನಸಿಕ ಅಸ್ವಸ್ಥತೆಯೂ ಇರಬಹುದು ಎಂದು ಗೃಹ ಸಚಿವರೇ ಹೇಳಿದ್ದವರು ಈಗ ಉಲ್ಟಾ ಹೊಡೆದಿದ್ದು ಯಾಕೆ ಎಂದು ಪ್ರಶ್ನಿಸಿದರು.ೆ.2ರಂದು ನಡೆದ ಘಟನೆ ಎಂದು ಹೇಳಿ ಮಾ.14ರಂದು ದೂರು ನೀಡಲಾಗಿತ್ತು. ಅಂದು ದಾಖಲಾದ ದೂರು ಸಂಬಂಧವಾಗಿ ಏ.12ರಂದು ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಯಡಿಯೂರಪ್ಪ ಅವರ ಹೇಳಿಕೆಯನ್ನು ದಾಖಲು ಮಾಡಲಾಗಿದೆ. ಲೋಕಸಭಾ ಚುನಾವಣೆ ಮುಗಿದ ಮೇಲೆ ಸೋಲಿನಿಂದ ಹತಾಶೆಗೊಂಡು ಸರ್ಕಾರ ದ್ವೇಷದ ಹೆಜ್ಜೆ ಇಟ್ಟಿರುವುದು ಖಂಡನೀಯ ಎಂದರು.ಗೃಹ ಸಚಿವರ ಅಂದಿನ ಹೇಳಿಕೆಗೂ, ಇಂದಿನ ಹೇಳಿಕೆಗೂ ಬಹಳಷ್ಟು ವ್ಯತ್ಯಾಸ ಇದೆ. ಅವತ್ತು ಅವರು ದೂರುದಾರರ ವ್ಯಕ್ತಿತ್ವವನ್ನೇ ಅನಾವರಣಗೊಳಿಸಿದ್ದರು. ಇವತ್ತು ಅಗತ್ಯ ಇದ್ದರೆ ಬಂಧಿಸುತ್ತೇವೆ ಎಂದಿದ್ದಾರೆ. ಸರಕಾರದ ನಿಲುವು ಬದಲಾಗಲು ಕಾರಣ ಏನು? ಎಂದು ಪ್ರಶ್ನಿಸಿದರು.ಲೋಕಸಭಾ ಚುನಾವಣೆಯ ಸೋಲು ಅರಗಿಸಿಕೊಳ್ಳಲು ಸಿಎಂ, ಡಿಸಿಎಂ ಅವರಿಗೆ ಸಾಧ್ಯವಾಗುತ್ತಿಲ್ಲ. ಅವರ ತವರು ಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಸೋತಿರುವುದು ಅವರನ್ನು ನಿದ್ದೆಗೆಡಿಸಿದೆ. ಸೋಲಿನ ಆಘಾತದಿಂದ ಹೊರ ಬರಲಾಗದೆ ಹೀಗೆ ಮಾಡಲಾಗುತ್ತಿದೆ ಎಂದು ದೂರಿದರು.ಚುನಾವಣೆಯಲ್ಲಿ ಅವರ ಗ್ಯಾರಂಟಿಗಳು ಕೈಕೊಟ್ಟಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿಯ ಹಗರಣ, ಅದರಿಂದ ಆಗಿರುವ ಮುಖಭಂಗ, ಆ ಲೂಟಿಯನ್ನು ಮುಚ್ಚಿ ಹಾಕಲು ಸಂಚು ನಡೆದಿದ್ದು, ಬಿಜೆಪಿ ಅದನ್ನು ಬಯಲಿಗೆ ಎಳೆದುದು, ಅದರಿಂದ ಸಚಿವ ರಾಜೀನಾಮೆ ಕೊಡಲು ಕಾರಣವಾದುದು- ಈ ಹತಾಶೆಯಿಂದ ಹೀಗೆ ಮಾಡುತ್ತಿರಬಹುದೇ? ಎಂದು ಶಂಕಿಸಿದ ಅವರು, ರಾಹುಲ್ ಗಾಂಧಿ, ಸುರ್ಜೇವಾಲಾ ಅವರ ಒತ್ತಡದಿಂದಲೂ ಹೀಗೆ ಮಾಡುತ್ತಿರಬಹುದು ಎಂದರು.ಒಂದು ಸುಳ್ಳು ಆರೋಪ ಸಂಬಂಧಿತ ಕೇಸಿಗೆ ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಅವರು ನ್ಯಾಯಾಲಯದ ಕಟಕಟೆಗೆ ಬಂದು ನಿಲ್ಲಬೇಕಾಯಿತು. ಶೇ.40 ಆರೋಪ ಸಾಬೀತು ಮಾಡಲು ಅವರಿಂದ ಅಸಾಧ್ಯ? ಅವರಿಗೆ ಶಿಕ್ಷೆ ಆಗುವ ಸಾಧ್ಯತೆಯೂ ಇದೆ. ಬಹುಶಃ ಆ ಕಾರಣಕ್ಕಾಗಿ ಹತಾಶೆಯಿಂದ ಯಡಿಯೂರಪ್ಪನವರ ಮೇಲೆ ರಾಜಕೀಯ ದುರುದ್ದೇಶದಿಂದ ಸೇಡು ತೀರಿಸಿಕೊಳ್ಳಲು ಮುಂದಾಗಿರಬೇಕುಎಂದರು.ಒಬ್ಬ ಪ್ರಭಾವಿ ಸಚಿವರು ಈ ಪ್ರಕರಣ ಜೀವ ಪಡೆಯಲು ಕಾರಣರಾಗಿದ್ದಾರೆ ಎಂಬ ಮಾಹಿತಿ ಕೂಡ ಅಧಿಕಾರಿಗಳ ಮೂಲಕ ತಿಳಿದು ಬಂದಿದೆ. ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸಲು ನಮ್ಮ ಅಡ್ಡಿ ಇಲ್ಲ ಎಂದು ಸ್ಪಷ್ಟಪಡಿಸಿದರು.ರಾಜಕೀಯ ದುರುದ್ದೇಶದಿಂದ ಹೀಗೆ ಮಾಡಿದರೆ ಅದರ ಪರಿಣಾಮ ನಿಮಗೆ ತಿರುಗುಬಾಣ ಆಗಲಿದೆ ಎಂದು ಎಚ್ಚರಿಸಿದರು.
ನಟ ದರ್ಶನ್ ಪ್ರಕರಣ:ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆ ಸುತ್ತ ಶಾಮಿಯಾನ ಹಾಕಿ, 144ನೇ ಸೆಕ್ಷನ್ ವಿಧಿಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ್ದರ ಕುರಿತು ಪ್ರತಿಕ್ರಿಯಿಸಿ, ಇದು ಪೊಲೀಸ್ ಇಲಾಖೆ ಮೇಲಿನ ಸಾರ್ವಜನಿಕರ ನಂಬಿಕೆಗೆ ಚ್ಯುತಿ ತರುವಂತಿದೆ ಎಂದರು.ದರ್ಶನ್ ಪ್ರಕರಣ, ರೇಣುಕಸ್ವಾಮಿ ಹತ್ಯೆ ಗಮನಿಸಿದರೆ, ಇಂಥ ಕಾಮೆಂಟ್‌ಗಳಿಗೆ ಹತ್ಯೆ ಮಾಡುವುದಾದರೆ ರಾಜಕಾರಣಿಗಳು ದಿನಕ್ಕೊಂದು ಹತ್ಯೆ ಮಾಡಬೇಕಾದೀತು ಎಂದರು.ಸೋಷಿಯಲ್ ಮೀಡಿಯದಲ್ಲಿ ಅವ್ವ, ಹೆಂಡತಿ, ಅಜ್ಜಿ, ಮುತ್ತಜ್ಜಿ ವರೆಗೂ ಮಾತನಾಡಿದವರಿದ್ದಾರೆ. ಈ ಹತ್ಯೆ ಮನುಕುಲ ತಲೆ ತಗ್ಗಿಸುವ ವಿಚಾರ ಎಂದರು.ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಪಕ್ಷದ ರಾಜ್ಯ ವಕ್ತಾರ ಡಾ. ನರೇಂದ್ರ ರಂಗಪ್ಪ ಅವರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
