ದಾವಣಗೆರೆ:ಮಳೆ ನಿಂತ ಮೇಲೆ ಹನಿಯೊಂದು ಮೂಡಿದೆ… ಎಂಬಾಂತಾಗಿದೆ ರಾಜ್ಯದಲ್ಲಿ ಸಿಎಂ ಗಾದಿ ಪ್ರಸ್ತಾಪ.
ಇನ್ನೂ ಎರಡೂವರೆ ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್​.ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ, ರಾಜ್ಯ ಬಿಜೆಪಿಯಲ್ಲಿ ಬಿಎಸ್​ವೈ ಅವರೇ ಸುಪ್ರೀಂ ಎಂದು ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆ ಬಳಿಕ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಘೋಷಿಸಿದ್ದರು.
ಇದೀಗ ಕೆ.ಎಸ್. ಈಶ್ವರಪ್ಪ ಅವರನ್ನು ಸಿಎಂ ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ. ದಾವಣಗೆರೆಯಲ್ಲಿ ಬುಧವಾರ ನಡೆದ ಕುರುಬ ಸಮುದಾಯದ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್. ರಾಮಪ್ಪ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕುರುಬ ಸಮುದಾಯದ ಐವರು ಶಾಸಕರು ಕಾರಣ. ಕುರುಬ ಜನಾಂಗದ ಐವರು ಯಡಿಯೂರಪ್ಪಗೆ ಬೆಂಬಲ ನೀಡಿದ್ರು. ಹಾಗಾಗಿ ಈಶ್ವರಪ್ಪ ಅವರನ್ನೇ ಸಿಎಂ ಮಾಡಬೇಕು. ನಾವೆಲ್ಲ ಈಶ್ವರಪ್ಪಗೆ ಬೆಂಬಲ ಕೊಡುತ್ತೇವೆ ಎನ್ನುವ ಮೂಲಕ ಸಿಎಂ ಗಾದಿ ವಿಚಾರವನ್ನ ಮತ್ತೆ ಮುನ್ನಲೆಗೆ ತಂದಿದ್ದಾರೆ.
ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಅಣ್ಣ-ತಮ್ಮ ಆತ್ಮಹತ್ಯೆ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಬೆಂಕಿ ಹಚ್ಚಿಕೊಂಡು ಸಾವಿನ ಮನೆಯ ಕದ ತಟ್ಟಿದ 22ರ ಯುವತಿ! ಆ ರಾತ್ರಿ ಏನಾಯ್ತು?

ಕೆಳಗೆ ಬಿದ್ದ ಶಾಸಕಿ ಸೌಮ್ಯರೆಡ್ಡಿ, ತುಳಿದುಕೊಂಡೇ ಮುನ್ನಡೆದ ಕಾರ್ಯಕರ್ತರು! ಕೈ ಪ್ರತಿಭಟನೆ ವೇಳೆ ಅವಘಡ

ಯಡಿಯೂರಪ್ಪ ಅವರೇ ಸುಪ್ರೀಂ, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಬಿಜೆಪಿ ಸಭೆ ಬಳಿಕ ಘೋಷಣೆ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:1 × two =
Remember me
