ನಂಜನಗೂಡು:ನಾವು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ನಾಯಕತ್ವ ಹಾಗೂ ಸಿಎಂ ಯಡಿಯೂರಪ್ಪ ಅವರ ಗಟ್ಟಿತನ ನೋಡಿ ಬಿಜೆಪಿ ಸೇರ್ಪಡೆಗೊಂಡಿದ್ದೇವೆ. ಸಿಎಂ ಕೈಬಲಪಡಿಸಬೇಕೆಂದು ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಆದರೆ ಅದು ಗುಂಪುಗಾರಿಕೆಯಲ್ಲ. ನಮ್ಮನ್ನು ಮಂತ್ರಿ ಮಾಡಿದರೂ ಖುಷಿ, ಮಾಡದಿದ್ದರೂ ಖುಷಿ ಎಂದು ಶಾಸಕ ರಮೇಶ್ ಜಾರಕಿಹೋಳಿ ತಿಳಿಸಿದರು.
ಮಂಗಳವಾರ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ವಿಶ್ವನಾಥ್ ಹಾಗೂ ಆರ್.ಶಂಕರ್ ಅವರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸದಂತೆ ಸಿಎಂ ಯಡಿಯೂರಪ್ಪ ಹೇಳಿದ್ದು ನಿಜ. ಆದರೆ ವಿಶ್ವನಾಥ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದಾರೆ.
ಅವರು ನಮ್ಮೊಂದಿಗೆ ಸೇರಿಕೊಂಡ ಮೇಲೆ ನಮ್ಮ ತಂಡಕ್ಕೆ ತೂಕ, ಧೈರ್ಯ ಬಂತು. ಅವರನ್ನು ಮಂತ್ರಿ ಮಾಡಬೇಕೆಂದು ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದ್ದೇನೆ. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತೋ ನೋಡೋಣ ಎಂದರು. ಮಾಜಿ ಸಚಿವ ಆರ್.ಶಂಕರ್ ಮಾತನಾಡಿ, ನಾನು ಲಾಬಿ ಮಾಡಲ್ಲ. ಯಡಿಯೂರಪ್ಪ ಅವರ ಮೇಲೆ ನನಗೆ ವಿಶ್ವಾಸವಿದೆ ಎಂದು ಹೇಳಿದರು.
ಚಾಮುಂಡೇಶ್ವರಿಗೆ ಪೂಜೆ:ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಸಚಿವ ಸ್ಥಾನಾಕಾಂಕ್ಷಿಗಳು ಚಾಮುಂಡೇಶ್ವರಿಯ ದರ್ಶನ ಪಡೆದರು. ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಹರಕೆ ತೀರಿಸಿದ ಮಿತ್ರಮಂಡಳಿ
ರಮೇಶ್ ಜಾರಕಿಹೋಳಿ ಮಿತ್ರಮಂಡಳಿ ಮಂಗಳವಾರ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಹರಕೆ ತೀರಿಸಿತು. ಸುಪ್ರೀಂ ಅನರ್ಹತೆ ತೀರ್ಪು ನೀಡುವ ಮುನ್ನ ಅ.7ರಂದು ಕಾರ್ತಿಕ ಮಾಸದ ಮೊದಲ ಸೋಮವಾರ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದ ಶಾಸಕರಾದ ರಮೇಶ್ ಜಾರಕಿಹೋಳಿ, ಮಹೇಶ್ ಕುಮಠ ಹಳ್ಳಿ ತೀರ್ಪು ನಮ್ಮ ಪರವಾಗುವಂತೆ ಹರಕೆ ಹೊತ್ತಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − fifteen =
Remember me
