ಬೆಂಗಳೂರು:ಬಿಜೆಪಿಯಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪಕ್ಷದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಶುಕ್ರವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆಸಿದ ಬೆಂಗಳೂರು ಶಾಸಕರ ಸಭೆಯಲ್ಲಿ ಅಸಹನೆ ಸ್ಪೋಟವಾಗಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್​ನಿಂದ ವಲಸೆ ಬಂದಿದ್ದ ಶಾಸಕರಲ್ಲಿ ಕೆಲವರಿಗೆ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನ ಹಾಗೂ ಮುಜುಗರ ಶಮನ ಮಾಡುವ ಸಲುವಾಗಿ ಬಿಎಸ್​ವೈ ಸಭೆ ಕರೆದಿದ್ದರು. ಟಿಕೆಟ್ ಹಂಚಿಕೆಯಿಂದ ಆರಂಭವಾದ ಅವ್ಯವಸ್ಥೆ ಇದೀಗ ವಿಪಕ್ಷ ನಾಯಕನ ಆಯ್ಕೆಗೂ ತಡೆಯಾಗಿ ಒಟ್ಟಾರೆ ರಾಜ್ಯ ಬಿಜೆಪಿಗೆ ದಿಕ್ಕಿಲ್ಲದ ಸ್ಥಿತಿ ನಿರ್ವಣವಾಗಲು ದೆಹಲಿ ನಾಯಕರೊಬ್ಬರು ಕಾರಣವೆಂದು ಕೆಲ ಪ್ರಮುಖ ಶಾಸಕರು ದೂರಿದರು. ಯಡಿಯೂರಪ್ಪ ಕೂಡಲೇ ಪಕ್ಷದ ಆಗುಹೋಗುಗಳ ಬಗ್ಗೆ ಚಿಂತನೆ ನಡೆಸದಿದ್ದರೆ ಪಕ್ಷ ಇನ್ನಷ್ಟು ಕುಸಿಯುವ ಆತಂಕವನ್ನು ಆ ಶಾಸಕರು ವ್ಯಕ್ತಪಡಿಸಿದರೆಂದು ಮೂಲಗಳು ತಿಳಿಸಿವೆ.
ಚುನಾವಣೆಯಲ್ಲಿ ಮೂಲ ಕಾರ್ಯಕರ್ತರು ವಿರೋಧ ಮಾಡಿದ್ದಾರೆ ಎಂದು ಮಾಜಿ ಸಚಿವರಾದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಅದರಲ್ಲೂ ಸೋಮಶೇಖರ್ ಬಿಜೆಪಿಯಲ್ಲಿಯೇ ಕೆಲವರು ನನ್ನನ್ನು ಕಾಂಗ್ರೆಸ್​ಗೆ ಸೇರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದರಿಂದ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲವೆಂಬುದು ಮತ್ತೊಮ್ಮೆ ಬಹಿರಂಗವಾಗಿತ್ತು.
ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಬಿಜೆಪಿಗೆ ಕರೆತಂದು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯಡಿಯೂರಪ್ಪ ಅವರೇ ಅಸಮಾಧಾನ ಶಮನ ಮಾಡಲು ಮುಂದಾದರೂ ಸಭೆಗೆ ಸೋಮಶೇಖರ್, ಬೈರತಿ ಬಸವರಾಜು, ವಿ. ಸೋಮಣ್ಣ ಗೈರು ಹಾಜರಾಗಿದ್ದರು.
ಪಕ್ಷದ ಎಲ್ಲ ಶಾಸಕರು ಒಗ್ಗಟ್ಟಿನಿಂದ ಇರಬೇಕು, ಹೊರಗಡೆಯಿಂದ ಬಂದವರನ್ನು ಕಡೆಗಣಿಸಬಾರದು, ಅವರಿಗೆ ಮುಜುಗರವಾಗುವಂತೆ ನಡೆದುಕೊಳ್ಳಬಾರದೆಂದು ಯಡಿಯೂರಪ್ಪ ಅವರು ತಾಕೀತು ಮಾಡಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬೆಂಗಳೂರಿನಲ್ಲಿ ಇದ್ದವರು ಇಂದಿನ ಸಭೆಗೆ ಬಂದಿದ್ದಾರೆ. ಉಳಿದವರು ಬಂದಿಲ್ಲ, ಮುಂದಿನ ದಿನಗಳಲ್ಲಿ ಅವರನ್ನು ಕರೆದು ಚರ್ಚೆ ನಡೆಸುತ್ತೇನೆ ಎಂದು ಹೇಳಿದರು. ಬಿಜೆಪಿಯನ್ನು ಬಿಟ್ಟು ಯಾವುದೇ ಶಾಸಕರು ಕಾಂಗ್ರೆಸ್​ಗೆ ಹೋಗುವುದಿಲ್ಲ. ಈ ರೀತಿಯಲ್ಲಿ ಹಬ್ಬುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವೆಂದು ಸ್ಪಷ್ಟಪಡಿಸಿದರು.
ಸರ್ಕಾರದ ವಿರುದ್ಧ ಹೋರಾಟ:ರಾಜ್ಯ ಸರ್ಕಾರ ಅಭಿವೃದ್ಧಿಯನ್ನು ಕಡೆಗಣಿಸಿ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಆರೋಪಿಸಿ ಬುಧವಾರ (ಆ.23) ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಪಕ್ಷದ ಶಾಸಕರು ಹಾಗೂ ಸಂಸದರ ಜತೆ ಸಭೆ ನಡೆಸಿದ ಬಳಿಕ ಮಾತನಾಡಿ, 5 ರಿಂದ 6 ಸಾವಿರ ಜನರನ್ನು ಸೇರಿಸಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ ಎಂದರು. ಮೊದಲಿಗೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ, ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು. ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಜಾಲತಾಣದಲ್ಲಿ ಸಕ್ರಿಯವಾಗಿರುವವರನ್ನು ಬೆದರಿಸಲಾಗುತ್ತಿದೆ. ಪತ್ರಕರ್ತರನ್ನು ಹೆದರಿಸುತ್ತ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಜತೆ ಮಾತನಾಡಿದ್ದು, ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ. ಪಕ್ಷದ ಶಾಸಕರು ಸ್ಥಳೀಯವಾಗಿರುವ ಸಮಸ್ಯೆ ಹೇಳಿದ್ದಾರೆ. ಅದನ್ನು ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೇವೆ. ಎಲ್ಲವನ್ನೂ ಬಗೆ ಹರಿಸುತ್ತೇವೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ.
| ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ
ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ: ವಿಚ್ಛೇದನ ಘೋಷಿಸಿದ ಕಿರಿಕ್ ಕೀರ್ತಿ

‘ಅಯ್ಯೋ ಪಾಪ..’ ಎಂದು ಹಣ ಹಾಕುವ ಮುನ್ನ ಹುಷಾರು: ಹೀಗೂ ವಂಚಿಸುತ್ತಾರೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 12 =
Remember me
