ಶಿವಮೊಗ್ಗ:ಕೆಎಸ್​​ ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್​ ತಪ್ಪಲು ನಾನು ಕಾರಣ ಅಲ್ಲ. ಬಿಜೆಪಿಯ ಕೇಂದ್ರ ಚುನಾವಣೆ ಸಮಿತಿ ಟಿಕೆಟ್ ನಿರ್ಧಾರ ಮಾಡಿದೆ. ಈಶ್ವರಪ್ಪ ಪಕ್ಷ ಕಟ್ಟಿ ಬೆಳೆಸಿದವರು, ಮನಸ್ಸಿಗೆ ನೋವಾಗಿರಬಹುದು. ರಾಜ್ಯ ನಾಯಕರು ಈಶ್ವರಪ್ಪ ಜತೆ ಮಾತಾಡುವ ಪ್ರಯತ್ನ ನಡೆಸಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಈ ಕುರಿತು ಮಾತನಾಡಿದ ಬಿಎಸ್​ವೈ, ಭಾರತೀಯ ಜನತಾ ಪಕ್ಷಕ್ಕೆ ಜನ ಆಶೀರ್ವಾದ ಮಾಡುತ್ತಾರೆಂದು ವಿಶ್ವಾಸವಿದೆ. ನನ್ನ ಅವಶ್ಯಕತೆ ಎಲ್ಲಿದೆ ಆ ಕ್ಷೇತ್ರಕ್ಕೆ ಹೋಗಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 25-26 ಕ್ಷೇತ್ರಗಳಲ್ಲಿ ಗೆದ್ದು ನಿಮ್ಮನ್ನು ನೋಡಲು ಲೋಕಸಭೆಗೆ ಬರುತ್ತೇವೆ ಅಂತ ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾತು ಕೊಟ್ಟಿದ್ಧೇವೆ. ಒಂದೆರಡು ಆಚೆ, ಈಚೆ ಆಗಬಹುದು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಈಗಾಗಲೇ ಗೆದ್ದು ಆಗಿದೆ. ಆದರೆ ಹೆಚ್ಚಿನ ಅಂತರಕ್ಕಾಗಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಐಪಿಎಲ್​ನಿಂದ ನಿವೃತ್ತರಾಗಲಿದ್ದಾರೆ ಕ್ಯಾಪ್ಟನ್​ ಕೂಲ್; 2025ರಲ್ಲಿ ಈತನೇ ತಂಡ ಮುನ್ನಡೆಸುವವನು: ಸಿಎಸ್​ಕೆ ಮಾಜಿ ಆಟಗಾರ
ಭಾರತೀಯ ಜನತಾ ಪಕ್ಷಕ್ಕೆ ಜನ ಆಶೀರ್ವಾದ ಮಾಡುತ್ತಾರೆಂದು ವಿಶ್ವಾಸವಿದೆ. ನನ್ನ ಅವಶ್ಯಕತೆ ಎಲ್ಲಿದೆ ಆ ಕ್ಷೇತ್ರಕ್ಕೆ ಹೋಗಿ ಪ್ರಚಾರ ಮಾಡುತ್ತೇನೆ. ಕೆಎಸ್​​ ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್​ ತಪ್ಪಲು ನಾನು ಕಾರಣ ಅಲ್ಲ. ಬಿಜೆಪಿಯ ಕೇಂದ್ರ ಚುನಾವಣೆ ಸಮಿತಿ ಟಿಕೆಟ್ ನಿರ್ಧಾರ ಮಾಡಿದೆ. ಈಶ್ವರಪ್ಪ ಪಕ್ಷ ಕಟ್ಟಿ ಬೆಳೆಸಿದವರು, ಮನಸ್ಸಿಗೆ ನೋವಾಗಿರಬಹುದು. ರಾಜ್ಯ ನಾಯಕರು ಈಶ್ವರಪ್ಪ ಜತೆ ಮಾತಾಡುವ ಪ್ರಯತ್ನ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಎಲ್ಲರೂ ಬರುತ್ತಾರೆ. ಕಾರ್ಯಕ್ರಮಕ್ಕೆ ಬಂದು ಕೆ.ಎಸ್.ಈಶ್ವರಪ್ಪ ಮಾತನಾಡುವ ವಿಶ್ವಾಸ ಇದೆ. ಅವರನ್ನು ಮತ್ತೆ ಕರೆತರುವ ಪ್ರಯತ್ನ ಪಕ್ಷದ ಹಿರಿಯರು ಮಾಡುತ್ತಿದ್ದಾರೆ. ತಮ್ಮ ಮನಸ್ಸಿಗೆ ಆದ ನೋವಿನಿಂದ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಅಂದಿದ್ದಾರೆ. ಟಿಕೆಟ್​ ವಿಚಾರದಲ್ಲಿ ನಮ್ಮ ಪಾತ್ರ ಏನೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕಲಬುರಗಿಯಲ್ಲಿ ನಡೆದ ಮೋದಿ ಕಾರ್ಯಕ್ರಮ ಯಶಸ್ವಿಯಾಗಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ನಾವು ಗೆಲ್ಲಲು ಪ್ರಯತ್ನ ಮಾಡುತ್ತಿದ್ದೇವೆ. ಕೂತಲ್ಲೂ ನಿಂತಲ್ಲೂ ಬಿಜೆಪಿ ಪರ ಒಳ್ಳೆಯ ಅಭಿಪ್ರಾಯ ಸಿಗುತ್ತಿದೆ. ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ ಕೋಪದಲ್ಲಿ ಮಾತನಾಡಿದ್ದಾರೆ. ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಕೂಡ ಬರುತ್ತಾರೆ. ಬಿಜೆಪಿ ಕಟ್ಟಲು ಕೆ.ಎಸ್.ಈಶ್ವರಪ್ಪ ಸಹ ಪ್ರಮುಖ ಪಾತ್ರ ವಹಿಸಿದ್ದಾರೆ. ಎಲ್ಲವೂ ಸರಿ ಹೋಗುತ್ತೆ ಅನ್ನೋ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eight =
Remember me
