ಶಿವಮೊಗ್ಗ:ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ, ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ದೊಡ್ಡ ಬಹುಮತದೊಂದಿಗೆ ಅಧಿಕಾರಕ್ಕೆ ಬರೋದೂ ಅಷ್ಟೇ ಸತ್ಯ ಎಂದು ಬಿಜೆಪಿ ಹಿರಿಯ ನಾಯಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡುತ್ತಾ, ಬಿಜೆಪಿ ಪೂರ್ಣ ಬಹುಮತ ಪಡೆಯುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಯಾರೋ ನಾನೇ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಅಂತ ಬಡಿದಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಅದು ಕೇವಲ ತಿರುಕನ ಕನಸಾಗಿ ಉಳಿಯುತ್ತದೆ ಎಂಬುದು ಅವರಿಗೂ ಮನವರಿಕೆ ಆಗಿದೆ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟರು.
ಪ್ರಧಾನಿ ನರೇಂದ್ರ ಮೋದಿಯವರಂತವರ ನಾಯಕತ್ವ ನಮಗಿರಬೇಕಾದರೇ ಮುಂಬರುವ ಚುನಾವಣೆಯಲ್ಲಿ ಜಯಭೇರಿ ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ. ಎಲ್ಲಾ ಕಾರ್ಯಕರ್ತರು ಬೂತ್ ಮಟ್ಟ ಬಲ ಪಡಿಸಿ ಮತದಾರರನ್ನು ಮನವೋಲಿಸಿ ಮತಗಟ್ಟೆಗೆ ಕರೆದುಕೊಂಡು ಬಂದು ಮತದಾನ ಮಾಡಿಸಬೇಕಿದೆ. ಈ ಬಾರಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂಬುದು ಕಾಂಗ್ರೆಸ್​​ಗೆ ಅದಾಗಲೇ ಮನವರಿಕೆ ಆಗಿದೆ ಎಂದು ಹೇಳಿದರು.
ಎರಡು-ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಬಗ್ಗೆ ಕೇಂದ್ರದಲ್ಲಿ ತೀರ್ಮಾನ ತೆಗೆದುಕೊಳ್ಳುವುರಿದ್ದಾರೆ. ಯಾರನ್ನು ಮಂತ್ರಿ ಮಾಡಬೇಕು ಎಂದು ಪ್ರಧಾನಿ ಹಾಗೂ ಕೇಂದ್ರದ ನಾಯಕರು ಅಂತಿಮಗೊಳಿಸುತ್ತಾರೆ ಎಂದರು.
ಸಿದ್ದರಾಮಯ್ಯ ನಿಂತಿರುವ ನೆಲವೇ ಕುಸಿಯುತ್ತಿದೆ. ಇದರ ಅರಿವಿಲ್ಲದೇ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಆರ್​ಎಸ್​ಎಸ್ ಬಗ್ಗೆ ಬಹಳ ಹಗುರವಾಗಿ ಮಾತನಾಡುತ್ತಿದ್ದಾರೆ. ಇದಕ್ಕೆ ತಕ್ಕ ಪಾಠವನ್ನು ರಾಜ್ಯದ ಜನ ಕಲಿಸುತ್ತಾರೆ ಎಂದು ಬಿಎಸ್​ವೈ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 12 =
Remember me
