ಬೆಳಗಾವಿ:ಕಾಂಗ್ರೆಸ್​ನಿಂದ ಕೋಲಾರದಲ್ಲಿ ಪ್ರಜಾಧ್ವನಿ ಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ. ಇದೀಗ ಯಡಿಯೂರಪ್ಪ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹೊಸ ಕುತೂಹಲದ ಚರ್ಚೆಗೆ ಕಾರಣವಾಗಿದೆ.
ಯಡಿಯೂರಪ್ಪ ಮಾತನಾಡುತ್ತಾ, ನಾನು ಭವಿಷ್ಯ ಹೇಳುತ್ತಿಲ್ಲ. ಆದರೆ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಸಿದ್ದರಾಮಯ್ಯ ಮೈಸೂರಿನಿಂದ ಸ್ಪರ್ಧಿಸಲು ಸದ್ದಿಲ್ಲದೆ ಪ್ರಯತ್ನ ಪಡುತ್ತಿದ್ದಾರೆ. ಕೋಲಾರದಲ್ಲಿ ನಿಂತು ಚುನಾವಣೆ ಎದುರಿಸುತ್ತೇನೆ ಎಂದು ನಾಟಕ ಮಾಡುತ್ತಿದ್ದಾರೆ ಎಂದು ಹೇಳಿದರು.
ನನ್ನ ಪ್ರಕಾರ ಸಿದ್ದರಾಮಯ್ಯ ಮೈಸೂರಿನಲ್ಲಿ ಸ್ಪರ್ಧಿಸುತ್ತಾರೆ. ಒಂದು ವೇಳೆ ಕೋಲಾರದಿಂದಲೇ ಚುನಾವಣೆ ಎದುರಿಸಲು ಮುಂದಾದರೆ ಸೋಲು ಖಚಿತ ಎಂದು ಹೇಳಿದರು.
ಸಿದ್ದರಾಮಯ್ಯ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಮತ್ತೆ ಬಾದಾಮಿಯಲ್ಲಿ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆ ಎದುರಾದಾಗೆಲ್ಲಾ, ಇನ್ನೂ ಅಂತಿಮವಾಗಿಲ್ಲ. ಹಲವು ಕ್ಷೇತ್ರಗಳಿಂದ ಆಹ್ವಾನ ಬಂದಿದೆ. ಕೋಲಾರ, ಬಾದಾಮಿ, ವರುಣಾ ಮೂರು ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವಂತೆ ಒತ್ತಡ ಇದೆ ಎಂಬ ಉತ್ತರವನ್ನೇ ನೀಡುತ್ತಾ ಬಂದಿದ್ದರು.
ಆದರೆ ಕಳೆದ ತಿಂಗಳು ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೋಲಾರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಆದರೆ ಕ್ಷೇತ್ರದ ಬಗ್ಗೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ಮಾಡುತ್ತದೆ ಎಂದು ಹೇಳಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 4 =
Remember me
