ಬೆಂಗಳೂರು:ವರುಣಾದಲ್ಲೂ ಸಿದ್ದರಾಮಯ್ಯ ಅವರಿಗೆ ನಿಂತ ನೆಲ ಕುಸಿಯುತ್ತಿದೆ. ಗೆಲುವು ಕಷ್ಟಕರವಾಗಿದೆ ಎಂದು ಮಾಜಿ ಸಿಎಂ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಪಕ್ಷದ ರಾಜ್ಯ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಬಿಎಸ್​ವೈ ಪ್ರಬಲ ಅಭ್ಯರ್ಥಿಯನ್ನು ವರುಣಾದಲ್ಲಿ ಸ್ಪರ್ಧೆಗೆ ಇಳಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗುತ್ತಿದೆ. ಖಂಡಿತವಾಗಿಯೂ ಸಿದ್ದರಾಮಯ್ಯ ಅವರಿಗೆ ತೀವ್ರ ಪೈಪೋಟಿವೊಡ್ಡಲಿದ್ದೇವೆ ಎಂದರು. ಬಿ.ವೈ.ವಿಜಯೇಂದ್ರ ಅವರನ್ನು ಸ್ಪರ್ಧೆಗೆ ಇಳಿಸಬೇಕೆಂಬ ಬೇಡಿಕೆ ಇರುವುದು ನಿಜ. ಆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ ಎಂದರು.
ಗೊಂದಲ ಸೃಷ್ಟಿ
ಬಿಜೆಪಿಯಲ್ಲಿ ಯಡಿಯೂರಪ್ಪ ಅವರಿಗೆ ಯಾವುದೇ ಅನ್ಯಾಯವಾಗಿಲ್ಲ. ವೀರಶೈವ- ಲಿಂಗಾಯತ ಸಮುದಾಯ,ಮಠಾಧೀಶರು ಸೇರಿ ಯಾರೊಬ್ಬರೂ ಇಂತಹ ಊಹಾಪೋಹಗಳಿಗೆ ಕಿವಿಗೊಡಬಾರದು. ರಾಜಕೀಯ ಕಾರಣಕ್ಕಾಗಿ ಇಂತಹ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಮುಸ್ಲಿಮರಿಗೆ ನಾವು ಅನ್ಯಾಯ ಮಾಡಿಲ್ಲ, ಅಧಿಕಾರಕ್ಕೆ ಬರುವ ಪಕ್ಷದಲ್ಲಿ ಈ ರೀತಿಯ ಗೊಂದಲ ಸಹಜ: ಬಿಎಸ್​ ಯಡಿಯೂರಪ್ಪ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಮತ್ತೆ ಮೀಸಲಾತಿ ಕೊಡುತ್ತೇವೆ ಎಂದಿರುವ ಡಿ.ಕೆ.ಶಿವಕುಮಾರ್ ತಿರುಕನ ಕನಸು ಕಾಣುತ್ತಿದ್ದಾರೆ. ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ಇದರ ಬಗ್ಗೆ ಕನಸು ಕಾಣಬೇಡಿ. ನಿಮ್ಮ ಸ್ಥಾನ ವಿರೋಧ ಪಕ್ಷ, ಎಲ್ಲಿ ಕೂರಬೇಕು ಅನ್ನೋದನ್ನು ಶಿವಕುಮಾರ್ ತೀರ್ಮಾನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
ಸಮರ್ಥನೆ
ಸಂವಿಧಾನದಲ್ಲಿ ಅವಕಾಶವಿಲ್ಲದ ಕಾರಣಕ್ಕೆ ಮುಸ್ಲಿಮರನ್ನು ಇಡಬ್ಲ್ಯುಎಸ್ ವ್ಯಾಪ್ತಿಗೆ ಸೇರಿಸಲಾಗಿದೆ. ಪರಿಶಿಷ್ಟ ಜಾತಿ ಒಳಮೀಸಲು ಸಮಾನವಾಗಿ ಹಂಚಿಕೆಯಾಗಿದೆ. ತಪ್ಪುಗ್ರಹಿಕೆಯಿಂದ ಬಂಜಾರ, ಮುಸ್ಲಿಮರು ಪ್ರತಿಭಟನೆ ನಡೆಸಿದ್ದು, ವಸ್ತುಸ್ಥಿತಿ ಮನವರಿಕೆ ಮಾಡಿಕೊಡಲಿದ್ದೇವೆ. ಎಲ್ಲವೂ ಸರಿ ಹೋಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಸದ್ಯದಲ್ಲೇ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡಗಡೆಯಾಗಲಿದ್ದು, ರಾಜ್ಯ ನಾಯಕರು ಪ್ರವಾಸಕ್ಕೆ ಸಜ್ಜಾಗಿದ್ದಾರೆ. ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಪಕ್ಷದ ವರಿಷ್ಠರ ನಿರ್ಣಯವೇ ಅಂತಿಮ. ನೂರಕ್ಕೆ ನೂರರಷ್ಟು ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಈ ಕಾರಣಕ್ಕೆ ಪಕ್ಷದ ಟಿಕೆಟ್ ಗೆ ಪೈಪೋಟಿ ಹೆಚ್ಚಿರುವುದು ಸಹಜವೆಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಸಮರ್ಥಿಡಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 19 =
Remember me
