ದಾವಣೆಗೆರೆ:ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಜುಲೈ 4ರೊಳಗೆ ಈಡೇರಿಸಬೇಕು ಇಲ್ಲವಾದಲ್ಲಿ ಜುಲೈ 5ರಿಂದ ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಸಿದ್ಧಾರೆ.
ದಾವಣಗೆರೆಯಲ್ಲಿ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಬಿಎಸ್​ವೈ ಚುನಾವಣೆಗೂ ಮುನ್ನ ಐದು ಗ್ಯಾರಂಟಿಗಳನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಸಹಿ ಮಾಡಿದ ಕಾರ್ಡ್​ಗಳನ್ನು​ ಮನೆ ಮನೆಗೆ ವಿತರಿಸಿದ್ದರು. ಇದನ್ನು ನಂಬಿ ಜನ ನಿಮಗೆ ಮತ ಹಾಕಿದ್ದಾರೆ. ನಿರೀಕ್ಷೆ ಮಾಡದಷ್ಟು ಮಟ್ಟಿಗೆ ಕಾಂಗ್ರೆಸ್​ ಗೆಲುವು ಸಾಧಿಸಿದೆ.
ಹಲವು ಷರತ್ತುಗಳನ್ನು ವಿಧಿಸಿ ಶಕ್ತಿ ಯೋಜನೆ ಜಾರಿಗೆ ತಂದು ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದೀರಾ. ಅದು ಬಿಟ್ಟರೆ ಒಂದೂವರೆ ತಿಂಗಳಿನಿಂದ ಉಳಿದ ಗ್ಯಾರಂಟಿಗಳನ್ನು ಜಾರಿ ಮಾಡಿಲ್ಲ. ಜುಲೈ 3ರಂದು ಬಜೆಟ್​ ಪೂರ್ವಭಾವಿ ಅಧಿವೇಶನ ನಡೆಯಲಿದ್ದು, ಅಷ್ಟರಲ್ಲಿ ಉಳಿದ ಗ್ಯಾರಂಟಿಗಳನ್ನು ಜಾರಿಗೆ ತರಬೇಕು. ಇಲ್ಲವಾದಲ್ಲಿ ಜುಲೈ 5ರಿಂದ ಗಾಂಧಿ ಪ್ರತಿಮೆ ಎದುರು ಉಪವಾಸ ಹೋರಾಟ ಮಾಡುತ್ತೇನೆ.
ಇದನ್ನೂ ಓದಿ:ಜೂನ್​ 23ರಿಂದ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್​
ಚುನಾವಣೆಯಲ್ಲಿ ಹಿನ್ನಡೆ ಕಂಡ ಅಭ್ಯರ್ಥಿಗಳು ನನ್ನ ಜೊತೆ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ಧಾರೆ. ವಿಧಾನಸಭೆ ಹಾಗೂ ವಿಧಾನಪರಿಷತ್​ನಲ್ಲಿ ನಮ್ಮ ಪಕ್ಷದ ಶಾಸಕರು ಪ್ರತಿಭಟನೆ ಮಾಡುವ ಮೂಲಕ ಕಾಂಗ್ರೆಸ್​ನವರ ಕಿವಿ ಹಿಂಡಲಿದ್ಧಾರೆ. ಭರವಸೆ ಈಡೇರಿಸುವವರೆಗೂ ಧರಣಿಯನ್ನು ಕೈ ಬಿಡುವ ಮಾತಿಲ್ಲ ಎಂದು ಹೇಳಿದ್ಧಾರೆ.
ಜನರನ್ನು ಮರಳು ಮಾಡಲು ಕಾಂಗ್ರೆಸ್​ ಸರ್ಕಾರ ದಿನಕ್ಕೊಂದು ನಾಟಕವಾಡುತ್ತಿದೆ. ಚುನಾವಣೆಯಲ್ಲಿ ಗೆಲ್ಲಲೆಂದು ಭರವಸೆ ನೀಡಿದ್ಧಾರೆಯೇ ಹೊರತು ಈ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಒಂದು ಮಾತು ಕೇಳಿಲ್ಲ. ಕೇಂದ್ರ ಸರ್ಕಾರ ಈಗಾಗಲೇ 5 ಕೆಜಿ ಅಕ್ಕಿ ಕೊಡುತ್ತಿದ್ದು, ಕಾಂಗ್ರೆಸ್ನವರು ಹೇಳಿದಂತೆ 10 ಕೆಜಿ ಸೇರಿಸಿ ಜನತೆಗೆ ಒಟ್ಟು 15 ಕೆಜಿ ಅಕ್ಕಿ ಕೊಡಲಿ. ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ಧಾರೆ.
​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 11 =
Remember me
