ಬೆಂಗಳೂರು:ಮಂಗಳವಾರ (ಸೆಪ್ಟಂಬರ್ 05) ತುಮಕೂರಿನ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗೃಹ ಸಚಿವ ಡಾ.ಜಿ. ಜಿ.ಪರಮೇಶ್ವರ್, ಹಿಂದೂ ಧರ್ಮ ಯಾವಾಗ ಹುಟ್ಟಿತು‌‌‌, ಯಾರು ಹುಟ್ಟಿಸಿದ್ದರು ಎಂಬುದೇ ಪ್ರಶ್ನೆ ಎಂದು ಹೇಳಿಕೆ ನೀಡಿದರು. ಈ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ, ಉದ್ಧಟತನದ ಹೇಳಿಕೆ ಅತ್ಯಂತ ಖಂಡನೀಯ ಮಾತ್ರವಲ್ಲ, ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿ ಎಂದು ಹೇಳಿದ್ದಾರೆ.
ಇದನ್ನೂ ಓದಿ:ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ವತಿಯಿಂದ ಸೆ.8ರಂದು ಪ್ರತಿಭಟನೆ
“ಹಿಂದೂ ಧರ್ಮದ ಅಸ್ತಿತ್ವ, ಮೂಲದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಉದ್ಧಟತನದ ಹೇಳಿಕೆ ಅತ್ಯಂತ ಖಂಡನೀಯ ಮಾತ್ರವಲ್ಲ, ಅವರ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ” ಎಂದು ಹೇಳಿದರು.
ಇದನ್ನೂ ಓದಿ:ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಅನ್ಯಾಯ ಆಗಿದೆ; ಸಂಸದರಿಂದ ನಿರೀಕ್ಷಿತ ಪ್ರಮಾಣದ ಅಭಿವೃದ್ಧಿ ಆಗಿಲ್ಲ; ಡಾ.ಆರ್.ಎಂ.ಕುಬೇರಪ್ಪ ಆರೋಪ
“ರಾಷ್ಟ್ರಗೀತೆಯ ಅಂತ್ಯದಲ್ಲಿ ‘ಜೈ ಹಿಂದ್’ ಎನ್ನುವ ಜಯಘೋಷ, ನಮ್ಮ ತಾಯ್ನೆಲ, ಇಲ್ಲಿನ ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ರಾಷ್ಟ್ರಧರ್ಮ, ಜೀವನ ಪದ್ಧತಿಯ ಸಂಕೇತವಾಗಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಹೊಣೆಗೇಡಿತನದ ಮಾತುಗಳನ್ನಾಡಿ ಪರಮೇಶ್ವರ್ ಅವರು ತಮ್ಮ ಘನತೆಗೆ ತಾವೇ ಕುಂದು ತಂದುಕೊಂಡಿದ್ದಾರೆ” ಎಂದು ಹೇಳಿದರು.
ಹಿಂದೂ ಧರ್ಮದ ಅಸ್ತಿತ್ವ, ಮೂಲದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ, ಗೃಹ ಸಚಿವ@DrParameshwaraಅವರ ಉದ್ಧಟತನದ ಹೇಳಿಕೆ ಅತ್ಯಂತ ಖಂಡನೀಯ ಮಾತ್ರವಲ್ಲ, ಅವರ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ.
ರಾಷ್ಟ್ರಗೀತೆಯ ಅಂತ್ಯದಲ್ಲಿ 'ಜೈ ಹಿಂದ್' ಎನ್ನುವ ಜಯಘೋಷ, ನಮ್ಮ ತಾಯ್ನೆಲ, ಇಲ್ಲಿನ ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ,…
— B.S.Yediyurappa (@BSYBJP)September 6, 2023

“ಕೋಟ್ಯಂತರ ಭಾರತೀಯರ ಭಾವನೆಗಳಿಗೆ ಘಾಸಿಯುಂಟು ಮಾಡುವ, ರಾಷ್ಟ್ರದ ಅಸ್ಮಿತೆಯಂತಹ ವಿಷಯಗಳ ಬಗ್ಗೆ ತಿಳಿದುಕೊಳ್ಳದೆ, ಹಗುರವಾಗಿ ಮಾತನಾಡುವುದು ಸರಿಯಲ್ಲ” ಎಂದು ಹೇಳುವ ಮುಖೇನ ಗೃಹ ಮಂತ್ರಿ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
‘ಇಂಡಿಯಾ-ಭಾರತ’ ವಿವಾದದ ಬೆನ್ನಲ್ಲೇ ಅಕ್ಷಯ್​ ಕುಮಾರ್ ನಟನೆಯ ಹೊಸ ಚಿತ್ರದ ಟೈಟಲ್​ನಲ್ಲಿ ಬದಲಾವಣೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 8 =
Remember me
