ಬೆಂಗಳೂರು:ಸಾರಿಗೆ ನೌಕರರ ಮುಷ್ಕರ ತೀವ್ರಗೊಳ್ಳುತ್ತಿದ್ದಂತೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ವಿರುದ್ಧ ಸಿಎಂ ಬಿ.ಎಸ್​. ಯಡಿಯೂರಪ್ಪ ಆಕ್ರೋಶ ಹೊರಹಾಕಿದ್ದಾರೆ.
ಕೋಡಿಹಳ್ಳಿ ಚಂದ್ರಶೇಖರ್​ ಅವರು ಸಾರಿಗೆ ನೌಕರರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಪ್ರತಿಭಟನೆ, ಮುಷ್ಕರದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಲು, ಬಸ್​ಗಳಿಗೆ ಕಲ್ಲು ತೂರಾಟ ನಡೆಸಿ ನಷ್ಟ ಉಂಟು ಮಾಡಲು ಕೋಡಿಹಳ್ಳಿ ಚಂದ್ರಶೇಖರ್​ರೇ ಕಾರಣ. ಅಲ್ಲದೆ ಕೋಡಿಹಳ್ಳಿ ಚಂದ್ರಶೇಖರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಬಗ್ಗೆ ಲಘುವಾಗಿ ಮಾತಾಡಿರುವುದು ಖಂಡನೀಯ ಎಂದು ಸಿಎಂ ಕಿಡಿಕಾರಿದ್ದಾರೆ.
ಸಾರ್ವಜನಿಕರ ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಈ ಮುಷ್ಕರದಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಸಾರಿಗೆ ನೌಕರರ ಜತೆ ಮಾತುಕತೆಗೆ ನಾವು ಸಿದ್ಧ. ಸಾರಿಗೆ ಸಿಬ್ಬಂದಿ ಜತೆ ಸಚಿವ ಲಕ್ಷ್ಮಣ ಸವದಿ‌ ನಿರಂತರ ಸಂಪರ್ಕದಲ್ಲಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಲೇ ಸತ್ಯಾಗ್ರಹ ನಿಲ್ಲಿಸಿ ಸಾರಿಗೆ ಸಚಿವರ ಜತೆ ಚರ್ಚೆಗೆ ಬನ್ನಿ ಎಂದು ಯಡಿಯೂರಪ್ಪ ಕೋರಿದ್ದಾರೆ.
ಇನ್ನು ಸಿಎಂ ಹೇಳಿಕೆಗೆ ತಿರುಗೇಟು ನೀಡಿರುವ ಕೋಡಿಹಳ್ಳಿ, ನಾನು ನೌಕರರನ್ನ ಎತ್ತಿಕಟ್ಡುವುದು ಅಂದ್ರೆ ಏನು? ಸಿಎಂ ಯಾವ ಅರ್ಥದಲ್ಲಿ ಮಾತನಾಡಿದ್ದಾರೆ? ಎಂದು ಅವರೇ ಹೇಳಲಿ. ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕರು ಒಟ್ಟಾಗಿ ಸ್ವಯಂ ಪ್ರೇರಿತರಾಗಿ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಬಲವಂತವಾಗಿ ಮುಷ್ಕರ ಮಾಡುತ್ತಿಲ್ಲ. ಈ ಬಗ್ಗೆ ಸಿಎಂ ಮೊದಲು ಗಮನ ಹರಿಸಲಿ ಎಂದಿದ್ದಾರೆ.
ಎಚ್​ಡಿಕೆ ವಿರುದ್ಧ ನನ್ನ ಆಕ್ಷೇಪಣೆ ಇದೆ. ಜೆಡಿಎಸ್ ರೈತರ ಪಕ್ಷ, ಅವರ ಚಿಹ್ನೆ ರೈತ ಮಹಿಳೆ. ನಾನು ಅವರ ವಿರುದ್ಧ ಮಾತನಾಡಿರೋದು ನಿಜ. ಅದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ. ಆರೋಪ- ಪ್ರತ್ಯಾರೋಪ ಆಗಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಏಕೆ ಮಾತನಾಡಿದ್ದಾರೆ. ಕುಮಾರಸ್ವಾಮಿ ಸರ್ಕಾರದ ಒಂದು ಭಾಗವೇ? ಎಂದು ಕೋಡಿಹಳ್ಳಿ ಪ್ರಶ್ನಿಸಿದ್ದಾರೆ.
ಇನ್ನು ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಚಂದ್ರು ಮಾತನಾಡಿ, ನಮ್ಮ ಒಕ್ಕೂಟದ ಗೌರವ ಅಧ್ಯಕ್ಷರನ್ನಾಗಿ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ನೇಮಕ ಮಾಡಿದ್ದೀವಿ. ನಮ್ಮ ಹೋರಾಟದ ಮುಂದಾಳತ್ವ ವಹಿಸುತ್ತಿರೋದು ಅವರೇ. ಮತುಕತೆಗೆ ಕರೆಯುವುದಾದರೆ ಸರ್ಕಾರ ಅವರನ್ನೇ ಕರೆಯಲಿ ಎಂದಿದ್ದಾರೆ.
ಸ್ಕೆಚ್​ ಹಾಕಿ ಕುಮಾರಸ್ವಾಮಿ ಸರ್ಕಾರವನ್ನ ಕೆಡವಿದ್ದು ನಾನೇ… ಎಂದ ಯೋಗೇಶ್ವರ್​ ಆಡಿಯೋ ವೈರಲ್​

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಾರಿಗೆ ನೌಕರ ಸಾವು

https://www.vijayavani.net/love-case-suicide/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − seven =
Remember me
