ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗುತ್ತಿದ್ದಾರಾ? ಹೀಗೊಂದು ಸುಳಿವನ್ನು ಅವರು ಆಪ್ತರೊಂದಿಗೆ ಹಂಚಿಕೊಂಡಿರುವ ವಿಚಾರ ಚಿಕ್ಕಬಳ್ಳಾಪುರದಲ್ಲಿ ಬಹಿರಂಗವಾಗಿದೆ.
ಅವರ ರಾಜಕೀಯ ನಿವೃತ್ತಿ ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಪಕ್ಷದಲ್ಲಿ ಮುಂಚೂಣಿಗೆ ಬರಬಲ್ಲ ನಾಯಕ ಯಾರು ಎಂಬ ಲೆಕ್ಕಾಚಾರಕ್ಕೂ ಇದು ನಾಂದಿ ಹಾಡಿದೆ. ಅನೇಕ ಸಂದರ್ಭದಲ್ಲಿ ಹಲವು ನಾಯಕರ ಹೆಸರು ಮುಂಚೂಣಿಗೆ ಬಂದರೂ, ರಾಜಕೀಯ ಲೆಕ್ಕಾಚಾರ ಇದಕ್ಕೂ ಮೀರಿದ್ದು ಎಂಬುದು ಸಾಬೀತಾಗಿತ್ತು. ಹೀಗಾಗಿ ಸಚಿವ ಸಂಪುಟ ವಿಸ್ತರಣೆಯ ಲೆಕ್ಕಾಚಾರದ ಜತೆಗೆ ಯಡಿಯೂರಪ್ಪ ಅವರ ಉತ್ತರಾಧಿಕಾರಿ ಯಾರು ಎಂಬ ವಿಚಾರವೂ ಕುತೂಹಲ ಹೆಚ್ಚಿಸಿದೆ.
ಬಹಿರಂಗವಾಗಿದ್ದು ಹೀಗೆ:“ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂಬರುವ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷದ ಸಂಘಟನೆಗೆ ಶ್ರಮಿಸಲಿದ್ದಾರೆ. ಸ್ವತಃ ಅವರೇ ನನಗೆ ಹೇಳಿದ್ದಾರೆ” ಎಂದು ಆರೆಸ್ಸೆಸ್​ ನೇತಾರ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸೀತರಾಮ ಕಲ್ಯಾಣೋತ್ಸವದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ವಿಚಾರ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
