ಗದಗ:ದೇವಸ್ಥಾನದಲ್ಲಿ ಕೊಡುವ ತೀರ್ಥವನ್ನು ಕುಡಿಯುವುದರಿಂದ ರೋಗಗಳು ಹರಡುತ್ತವೆ. ತೀರ್ಥ ಕೊಡುವವರು ಶುದ್ಧವಾಗಿ ಕೈ ತೊಳೆದಿರುವುದಿಲ್ಲ. ಇದರಿಂದ ಎಷ್ಟೋ ಜನರು ವಾಂತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಎಲ್ಲರ ಮನೆಯಲ್ಲಿಯೂ ನೀರು ಇದೆ. ಹೀಗಿದ್ದಾಗ ತೀರ್ಥ ಯಾಕೆ ಕುಡಿಯಬೇಕು. ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಇದರಿಂದ ನದಿಯಲ್ಲಿ ಹೆಣಗಳು ತೇಲಿ ಬರುತ್ತವೆ. ಇಂತಹ ಜಲವನ್ನು ಗಂಗಾಜಲವೆಂದು ಯಾಕೆ ಕುಡಿಯಬೇಕು ಎಂದು ಲಲಿತಾ ನಾಯಕ್ ಪ್ರಶ್ನಿಸಿದ್ದಾರೆ.
ಕಾಣದ ದೇವರಿಗೆ ಪೂಜೆ ಮಾಡುವುದೆಂದು ಹೂವು, ಬಟ್ಟೆ ಯಾಕೆ ಹಾಕಬೇಕು. ದೇವಸ್ಥಾನದಲ್ಲಿ ಯಾರೋ ಹೇಳಿದರೆಂದು ದುಡ್ಡು ಹಾಕಿತ್ತಾರೆ. ಜನರು ಅನಗತ್ಯವಾಗಿ ಹಣ ಪೋಲು ಮಾಡಬಾರದು. ಆದರೆ ಈಗ ಜನರಿಗೂ ತಿಳುವಳಿಕೆ ಬಂದಿದೆ. ಜನರು ದೇವಸ್ಥಾನದಲ್ಲಿ ದುಡ್ಡು ಹಾಕುತ್ತಿಲ್ಲ ಎಂದು ಹೇಳಿದರು.
ಪೂಜೆ ಎಂದರೆ ದೇಹ, ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳುವುದು. ಇದನ್ನು ಸರ್ಕಾರಗಳು, ಸಂಘಸಂಸ್ಥೆಗಳು ಜನರಿಗೆ ಮನವರಿಕೆ ಮಾಡಿಕೊಡಬೇಕಾಗಿದೆ. ವೈಜ್ಞಾನಿಕ ಸತ್ಯ ಏನಿವೆಯೋ ಅದನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದು ಲಲಿತಾ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 2 =
Remember me
