ಬೆಂಗಳೂರು:ಕೆಲ ತಿಂಗಳುಗಳಿಂದ ದೇಶಾದ್ಯಂತ ಹಠಾತ್​ ಆಗಿ ಹೃದಯ ಸಂಬಂಧಿ ಸಾವುಗಳು ನಡೆಯುತ್ತಿದ್ದು ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲೂ ವೈರಲ್​ ಆಗಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಂತಹ ಸಾವುಗಳು ಆಗದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದ್ದು ಈ ವಿಚಾರ ಬಜೆಟ್​ನಲ್ಲೂ ಪ್ರಸ್ತಾಪ ಆಗಿದೆ.
ಕರ್ನಾಟಕ ರತ್ನ ಡಾ| ಪುನೀತ್​ ರಾಜ್‌ಕುಮಾರ್‌ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಬಜೆಟ್​ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ 15 ಸಿ.ಟಿ ಸ್ಕ್ಯಾನಿಂಗ್ ಮತ್ತು ಆರು ಎಂಆರ್ಐ ಸ್ಕ್ಯಾನಿಂಗ್ ಕೇಂದ್ರಗಳನ್ನು ಕೆಲವು ಜಿಲ್ಲಾಸ್ಪತ್ರೆಗಳಲ್ಲಿ ಈಗಾಗಲೇ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಿ, ಉಚಿತ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತಿದೆ. ಈ ಸೇವೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೂ ವಿಸ್ತರಿಸುವ ಬಗ್ಗೆಯೂ ಬಜೆಟ್​ನಲ್ಲಿ ಪ್ರಸ್ತಾಪ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
