
ಬೆಂಗಳೂರು:ಮುಖ್ಯಮಂತ್ರಿಗಳು ಆಯವ್ಯಯದಲ್ಲಿ ಘೋಷನೆ ಮಾಡಿರುವ ಯೋಜನೆಗಳನ್ನು 15 ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸಿ ಅನುಷ್ಠಾನ ಮಾಡಲು ಕಾರ್ಯೋನ್ಮುಖರಾಗಬೇಕೆಂದು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಸೂಚಿಸಿದ್ದಾರೆ.ಇಂದು ವಿಕಾಸಸೌಧದಲ್ಲಿ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು,ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಕ್ರಿಯಾ ಯೋಜನೆಯನ್ನು ಇನ್ನು 15 ದಿನದೊಳಗೆ ಅನುಮೋದನೆ ನೀಡುವ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯ ಮಾಡಿ ಅಂಗೀಕರಿಸಲು ಕ್ರಮವಹಿಸಿಬೇಕೆಂದರು.ಸಭೆಯಲ್ಲಿ ಅಮೃತ್ 1 ಮತ್ತು 2 , ಸ್ವಚ್ಚ ಭಾರತ್ ಮಿಶನ್ (ಖಆ) 1 ಮತ್ತು 2 , ನಗರೋತ್ಥಾನ 3 ಮತ್ತು 4 , ಎಸ್ ಎ್ ಸಿ , 14 ಮತ್ತು 15 ನೇ ಹಣಕಾಸು ಯೋಜನೆ, ಇಂದಿರಾ ಕ್ಯಾಂಟಿನ್ ಕಟ್ಟಡಗಳ ನಿರ್ಮಾಣದ ಪ್ರಗತಿ, ಇಂದಿರಾ ಕ್ಯಾಂಟಿನ್‌ಗಳ ಹೊಸ ಮೆನು, ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆ, ಎ ಮತ್ತು ಬಿ ಖಾತೆಗಳ ಕುರಿತು ಚರ್ಚೆ ಹಾಗೂ ಇನ್ನುಳಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.ಮುಖ್ಯಮಂತ್ರಿಗಳ ಕನಸಿನ ಯೋಜನೆಯಾದ ಹೆಚ್ಚುವರಿ ಇಂದಿರಾ ಕ್ಯಾಂಟಿನ್ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಲು ಸೂಚಿಸಿದರು. ಹೊಸ ಇಂದಿರಾ ಕ್ಯಾಂಟಿನ್ ಮೆನು ಅನ್ನು ಕೂಡಲೇ ಜಾರಿ ಮಾಡುವಂತೆ ತಾಕೀತು ಮಾಡಿದರು.ಪ್ರಗತಿಯಲ್ಲಿರುವ ಕಾಮಗಾರಿಗಳು ಅತೀ ವೇಗವಾಗಿ ಪೂರ್ಣಗೊಳ್ಳಿಸಬೇಕು. ಯಾವುದೇ ಕಾಮಗಾರಿಗಳು ಅನ್ಯ ಕಾರಣಗಳಿಂದ ನಿಲ್ಲಿಸಬಾರದು. ಇಲಾಖೆಯ ಪ್ರಗತಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಸರಿಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಭೆಯಲ್ಲಿ ಸಚಿವರು ಸೂಚನೆ ನೀಡಿದರು.ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು, ಮಿಶನ್ ಡೈರೆಕ್ಟರ್ ಸ್ವಚ್ಚ ಭಾರತ್ ಮಿಶನ್, ಸಚಿವರ ಆಪ್ತ ಕಾರ್ಯದರ್ಶಿಗಳು, ಜಂಟಿ ನಿರ್ದೇಶಕರು , ಮುಖ್ಯ ಎಂಜಿನಿಯರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − six =
Remember me
