

ಮಂಗಳೂರು:ಉರ್ವ ಮಾರಿಗುಡಿ ದೇವಳ ಬಳಿ ನಿರ್ಮಾಣ ಹಂತದ ಕಟ್ಟಡದ ಸ್ಲಾಬ್ ಕುಸಿದು ಬಿದ್ದ ಪರಿಣಾಮ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಗೋವಾ ಮೂಲದ ಸಲೀಂ ಶೇಖ್(45)ಮೃತಪಟ್ಟವರು. ಕಾವೂರು ಪಂಜಿಮೊಗರು ನಿವಾಸಿ ಕಿರಣ್ ಮತ್ತು ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಹನುಮಂತ ಅವರ ತಲೆಗೆ ಗಂಭೀರ ಗಾಯವಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುರುವಾರ ಸಂಜೆ ಘಟನೆ ನಡೆದಿದ್ದು, ಪ್ರಜ್ಞೆ ತಪ್ಪಿ ಬಿದ್ದಿದ್ದ ಸಲೀಂ ಶೇಖ್ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದರು. ತಲೆಗೆ ಗಂಭೀರ ಸ್ವರೂಪದ ಗಾಯವಾದ ಪರಿಣಾಮ ಅವರು ಮೃತಪಟ್ಟಿದ್ದರು.
ಗುಜರಾತ್ ಮೂಲದ ಉದ್ಯಮಿಗೆ ಸೇರಿದ ಸೈಟ್‌ನಲ್ಲಿ ಬೃಹತ್ ಮನೆ ನಿರ್ಮಾಣ ಮಾಡುತ್ತಿದ್ದಾರೆ. ಕಾಂಕ್ರೀಟ್ ಸ್ಲಾೃಬ್‌ಗೆ ಸಪೋರ್ಟ್ ನೀಡಿದ್ದ ಕಂಬಗಳನ್ನು ತೆರವು ಮಾಡುತ್ತಿದ್ದಾಗ ಏಕಾಏಕಿ ಸ್ಲಾಬ್ ಕುಸಿದು ನೆಲಕ್ಕೆ ಅಪ್ಪಳಿಸಿದೆ. ಈ ವೇಳೆ ಸಪೋರ್ಟ್ ತೆರವು ಮಾಡುತ್ತಿದ್ದ ಕಿರಣ್ ಮತ್ತು ಹನುಮಂತ ಎಂಬುವರ ತಲೆ ಮೇಲೆ ಸ್ಲಾಬ್ ಬಿದ್ದಿದೆ. ಉರ್ವ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ. ಕಟ್ಟಡ ಕಾಮಗಾರಿಯಲ್ಲಾದ ಲೋಪದಿಂದಾಗಿ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಪ್ರಕರಣ ದಾಖಲಾಗಿದ್ದರೂ, ಪೊಲೀಸರು ವಿಷಯ ಬಹಿರಂಗ ಮಾಡದೆ ಮುಚ್ಚಿಟ್ಟಿದ್ದರು. ಮನೆ ಮಾಲೀಕ, ಕಂಟ್ರಾಕ್ಟರ್ ಮತ್ತು ಸೈಟ್ ಮೇಲ್ವಿಚಾರಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
