ಚಾಮರಾಜನಗರ:ತಮಿಳುನಾಡು ಗಡಿಭಾಗದಲ್ಲಿ ವೀರಪ್ಪನ್​ ಕಾಲದಿಂದಲೂ ಅರಣ್ಯ ಇಲಾಖೆಯವರು ಹಾಗೂ ಕಾಡುಗಳ್ಳರ ನಡುವಿನ ಸಂಘರ್ಷ ನಡೆಯುತ್ತಿದ್ದು, ಇದೀಗ ಅಂಥದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ. ತಮಿಳುನಾಡಿನ ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಮಾತ್ರವಲ್ಲ ಒಂದು ಶವ ಕೂಡ ಸಿಕ್ಕಿದೆ.
ಕರ್ನಾಟಕ-ತಮಿಳುನಾಡು ಗಡಿಭಾಗದ ಕಾವೇರಿ ವನ್ಯಜೀವಿ ವಿಭಾಗದ ಪಾಲಾರ್ ಅರಣ್ಯ ವಲಯದಲ್ಲಿ ಈ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದ್ದು, ಶವವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ತಮಿಳುನಾಡಿನ ಬೇಟೆಗಾರರು ಅಕ್ರಮವಾಗಿ ಅರಣ್ಯಕ್ಕೆ ಪ್ರವೇಶ ಮಾಡಿ ವನ್ಯ ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದರು. ಅದನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಗಮನಿಸಿದಾಗ ಅತ್ತ ಕಡೆಯಿಂದ ಬೇಟೆಗಾರರು ಗುಂಡಿನ ದಾಳಿ ನಡೆಸಿದ್ದು, ಪ್ರತಿಯಾಗಿ ಅರಣ್ಯ ಇಲಾಖೆಯವರೂ ಗುಂಡಿನ ದಾಳಿ ನಡೆಸಿದ್ದಾರೆ.
ಕಾವೇರಿ ನದಿಯಲ್ಲಿ ತಮಿಳುನಾಡು ಮೂಲದ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದ್ದು, ಈ ಗುಂಡಿನ ದಾಳಿಯಲ್ಲಿ ಬೇಟೆಗಾರನೊಬ್ಬ ಸಾವಿಗೀಡಾಗಿರಬಹುದು ಎಂಬ ಶಂಕೆ ಮೂಡಿದೆ. ಶವ ಪತ್ತೆಯಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಡೆಯಿಂದ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗುಂಡಿನ ದಾಳಿ ವೇಳೆ ಅದೃಷ್ಟವಶಾತ್​ ಅರಣ್ಯ ಸಿಬ್ಬಂದಿಗೆ ಯಾವುದೇ ಗಾಯವಾಗಿಲ್ಲ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನೇನು ನಿಮ್ಮ ಕೆಲಸದ ಅವಧಿ ಮುಗಿಯುತ್ತೆ, ಮನೆಗೆ ಹೊರಡಿ: ಈ ಕಂಪನಿಯಲ್ಲಿ ಉದ್ಯೋಗಿಗಳಿಗೆ ಹೀಗೊಂದು ಎಚ್ಚರಿಕೆ!

ಕೋವಿಶೀಲ್ಡ್ ಕೊಡಬಾರದಿತ್ತು, ಭಾರತದಲ್ಲಿನ್ನು ವ್ಯಾಕ್ಸಿನ್​ ಅನಗತ್ಯ; ಲಸಿಕೆ ಅಡ್ಡಪರಿಣಾಮಗಳ ಕುರಿತು ದನಿ ಎತ್ತಿದ ಡಾಕ್ಟರ್​

ಕೋವಿಡ್​ ತಡೆಯುವಲ್ಲಿ ಮಾಸ್ಕ್​ ನಿಜಕ್ಕೂ ಪರಿಣಾಮ ಬೀರಿದೆಯಾ?: ಇಲ್ಲಿದೆ ಅಧ್ಯಯನವೊಂದರ ಮಾಹಿತಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:11 − 9 =
Remember me
