ಕಲಬುರಗಿ:ಎಮ್ಮೆಯೊಂದಕ್ಕೆ ಬುಲೆಟ್ ಬೈಕ್ ಡಿಕ್ಕಿ ಹೊಡೆದ ಪರಿಣಾಮವಾಗಿ ಎಮ್ಮೆ ಸ್ಥಳದಲ್ಲೇ ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.
ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಂಕಲಗಾ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್​ನಲ್ಲಿದ್ದ ಮಗು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಯಿ ಮಹಾದೇವಿ ಹಾಗೂ ನಾಲ್ಕು ವರ್ಷದ ಮಗು ಸ್ಮಿತಾ ಪರಿಸ್ಥಿತಿ ಚಿಂತಾಜನಕವಾಗಿದೆ. ಬೈಕ್ ಸವಾರ ದೇವಿಂದ್ರಪ್ಪ ಹಾಗೂ ಬಸಮ್ಮ ಎಂಬವರಿಗೆ ಗಂಭೀರ ಗಾಯಗಳಾಗಿವೆ.
ಬೈಕ್​ನಲ್ಲಿದ್ದವರು ಗೊಬ್ಬರು (ಕೆ) ಗ್ರಾಮದಿಂದ ಬುಲೆಟ್​ನಲ್ಲಿ ಮಹಾರಾಷ್ಟ್ರಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುವಾಗ ಬಂಕಲಗಾ ಬಳಿ ಎಮ್ಮೆಗೆ ಬುಲೆಟ್ ಡಿಕ್ಕಿ ಹೊಡೆದಿದೆ. ಬೈಕ್ ಅಪ್ಪಳಿಸಿದ ರಭಸಕ್ಕೆ ಎಮ್ಮೆ ಸ್ಥಳದಲ್ಲೇ ಸಾವಿಗೀಡಾಗಿದೆ. ಗಾಯಾಳುಗಳನ್ನ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋವಿಡ್ ಟೈಮ್​ನಲ್ಲಿ ಕೂಡ ಐದು ರೂಪಾಯಿಯನ್ನೂ ಬಿಡದ ಅನಿರುದ್ಧ್: ನಿರ್ದೇಶಕನ ಆರೋಪ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 3 =
Remember me
