ಬೆಂಗಳೂರು:ಮುಡಾ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಗೆ ಬುಲೆಟ್ ಪೂ›ಫ್ ಕಾರು, ಝೆಡ್ ಶ್ರೇಣಿಯ ಭದ್ರತೆ ಪೊಲೀಸರು ಒದಗಿಸಿದ್ದಾರೆ.
ರಾಜ್ಯಪಾಲರ ಮೇಲೆ ಕೆಲವು ಸಮಾಜಘಾತುಕ ಶಕ್ತಿಗಳು ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ತಕ್ಷಣವೇ ಅವರಿಗೆ ಬುಲೆಟ್ ಪೂ›ಫ್ ಕಾರು ಒದಗಿಸುವಂತೆ ಕೇಂದ್ರ ಗುಪ್ತಚರ ವಿಭಾಗವು ರಾಜ್ಯ ಗೃಹ ಇಲಾಖೆಗೆ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ
ಅನುಮತಿ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ರಾಜ್ಯಪಾಲರ ನಿರ್ಧಾರ ಖಂಡಿಸಿ ಕಾಂಗ್ರೆಸ್ ಸೇರಿ ವಿವಿಧ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕಾರಣಕ್ಕಾಗಿ ರಾಜ್ಯಪಾಲರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಕೆಲ ಕಾಂಗ್ರೆಸ್ ನಾಯಕರು ರಾಜಭವನಕ್ಕೆ ನುಗ್ಗುವುದಾಗಿ ಹೇಳಿಕೆ ನೀಡಿದ್ದಾರೆ. ಇನ್ನು ಕೆಲ ನಾಯಕರು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಅದಕ್ಕೆ ರಾಜ್ಯಪಾಲರೇ ನೇರ ಹೊಣೆ ಎಂಬಂತಹ ಹೇಳಿಕೆ ನೀಡುತ್ತಿದ್ದಾರೆ. ಗೆಹಲೋತ್ ಕರ್ನಾಟಕಕ್ಕೆ ರಾಜ್ಯಪಾಲರಾಗಿ ಬಂದಾಗಿನಿಂದ ಸಾಮಾನ್ಯ ಕಾರಿನಲ್ಲೇ ಓಡಾಡುತ್ತಿದ್ದರು.
ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಪ್ರಾಣ ಬೆದರಿಕೆ ಇರುವ ಗಣ್ಯರಿಗೆ ಮಾತ್ರ ಅಪರೂಪದ ಸಂದರ್ಭದಲ್ಲಿ ಬುಲೆಟ್ ಫ್ರೂಪ್ ಕಾರು ನೀಡಲಾಗುತ್ತದೆ. ರಾಜ್ಯಪಾಲರ ವಿರುದ್ಧ ಕೆಲವು ಸಂಘಟನೆಗಳು ತೀವ್ರ ಆಕ್ರೋಶಗೊಂಡಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಸಾರ್ವಜನಿಕ ಕಾರ್ಯಕ್ರಮಕ್ಕೆ ಗೈರು?:ಆ.29ರವರೆಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗದಂತೆ ಕೇಂದ್ರ ಗುಪ್ತಚರ ಇಲಾಖೆಯು ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗದಿರಲು ರಾಜ್ಯಪಾಲರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬುಧವಾರ ನಡೆದ ನೃಪತುಂಗ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮಕ್ಕೆ ರಾಜ್ಯಪಾಲರು ಗೈರಾಗಿದ್ದರು. ಪ್ರಾಸಿಕ್ಯೂಷನ್​ಗೆ ನೀಡಿರುವ ಅನುಮತಿ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೋಗಿದ್ದು, ಅರ್ಜಿ ವಿಚಾರಣೆ ಆ.29ಕ್ಕೆ ಮುಂದೂಡಿಕೆಯಾಗಿದೆ. ಅಲ್ಲಿವರೆಗೂ ಯಾವುದೇ ರೀತಿ ಕ್ರಮ ಕೈಗೊಳ್ಳಬಾರದೆಂದು ನ್ಯಾಯಾಲಯವು ನಿರ್ದೇಶನ ನೀಡಿದ್ದೆ. ಹೀಗಾಗಿ ರಾಜ್ಯಪಾಲರು ಅಲ್ಲಿಯವರೆಗೂ ಯಾವುದೇ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇಲ್ಲ.
60 ವರ್ಷದ ಅರ್ಚಕನ ಜೊತೆ 20 ವರ್ಷದ ಯುವತಿ ಚಾಟಿಂಗ್: ಆನ್​ಲೈನ್​ನಲ್ಲೇ ಪೂಜಾರಿಗೆ ಲಕ್ಷ, ಲಕ್ಷ ಪಂಗನಾಮ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
