ಬೆಂಗಳೂರು:ಲೋಕಸಭೆ ಚುನಾವಣೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸರ್ಕಸ್ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಹಾಗೂ ಬಿಜೆಪಿಗೆ ವಿಭಿನ್ನ ಸಮಸ್ಯೆ, ಸವಾಲುಗಳು ಬೆನ್ನೇರಲಾರಂಭಿಸಿದೆ. ಕೈಪಡೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ಐದಾರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆ ಕಾಡುತ್ತಿದ್ದರೆ, ಟಿಕೆಟ್ ಕೈತಪು್ಪವವರ ಮುನಿಸು ಬಿಜೆಪಿಯಲ್ಲಿ ಜ್ವಾಲಾಗ್ನಿ ಸ್ಪೋಟಗೊಳ್ಳುವ ಸುಳಿವು ಬಹಿರಂಗಪಡಿಸಿದೆ. ಮೈಸೂರು, ಚಿಕ್ಕಮಗಳೂರು- ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಬೀದರ್ ಕ್ಷೇತ್ರ ಬಿಜೆಪಿಗೆ ಕಗ್ಗಂಟಾಗಿದೆ. ಮೈಸೂರು ಟಿಕೆಟ್ ಯಾರಿಗೆಂಬ ವಿಚಾರ ಸಾರ್ವತ್ರಿಕ ಚರ್ಚೆಗೊಳಪಟ್ಟಿರುವ ನಡುವೆಯೇ ಬಹಿರಂಗ ಅಸಮಾಧಾನದ ಕೆಂಡ ಕಮಲದಲ್ಲಿ ಕಂಪನ ಎಬ್ಬಿಸಿದೆ. ಹೀಗಾಗಿಯೇ ಸಂಸದ ಪ್ರತಾಪ್ ಸಿಂಹ ಅವರನ್ನು ಕರೆಸಿಕೊಂಡ ಚುನಾವಣಾ ಉಸ್ತುವಾರಿ ಖಡಕ್ ಸೂಚನೆ ನೀಡಿ ಕಳಿಸಿದ್ದಾರೆ. ಮತ್ತೊಂದೆಡೆ ಮಾಜಿ ಸಚಿವ ಸಿ.ಟಿ ರವಿ ಅವರನ್ನು ದೆಹಲಿಗೆ ಕರೆಸಿ ಕೊಂಡಿರುವ ನಾಯಕರು ತಿಳಿಹೇಳಿದ್ದಾಗಿ ತಿಳಿದು ಬಂದಿದೆ. ಇನ್ನು ಕಾಂಗ್ರೆಸ್​ನದ್ದೇ ಮತ್ತೊಂದು ವಿಚಿತ್ರ ಸಮಸ್ಯೆ. ಯುದ್ಧಕಾಲೇ ಶಸ್ತ್ರಾಭ್ಯಾಸ ಎಂಬಂತೆ ಚುನಾವಣೆ ದಿನಾಂಕ ಘೋಷಣೆ ಆಗುವ ಹೊತ್ತಲ್ಲಿ ಸಮರ್ಥ ಅಭ್ಯರ್ಥಿಗಾಗಿ ಪರದಾಟ ನಡೆಸಿದೆ. ‘ನೀವು ಸ್ಪರ್ಧಿಸಿ… ನೀವು ಸ್ಪರ್ಧಿಸಿ’ ಅಂತ ನಾಯಕರ ಎಡತಾಕುತ್ತಿರುವ ಬೆಳವಣಿಗೆಗಳು ನಡೆದಿವೆ.
ಬೆಂಗಳೂರಿನ 3 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಪಾಲಿಗೆ ಕಬ್ಬಿಣದ ಕಡಲೆಯಾಗಿದೆ. ಇದು ಕಾಂಗ್ರೆಸ್ ಹೈಕಮಾಂಡನ್ನೂ ಚಿಂತೆಗೆ ದೂಡಿದೆ. ಜತೆಗೆ ಕೋಲಾರ ಮತ್ತು ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧವೂ ಗೊಂದಲ ಸೃಷ್ಟಿಯಾಗಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ನಾರಾಯಣ ಸ್ವಾಮಿ, ರಾಜೀವ್ ಗೌಡ ಹೆಸರು ಚರ್ಚೆಯಲ್ಲಿದ್ದರೂ ಇವರಿಬ್ಬರನ್ನು ಹೊರತುಪಡಿಸಿ ಬೇರೆಯವರನ್ನು ಅಭ್ಯರ್ಥಿಯಾಗಿಸಲು ಹೈಕಮಾಂಡ್ ಬಯಸಿದೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಶಾಂತಿ ನಗರ ಶಾಸಕ ಹ್ಯಾರಿಸ್, ಅವರ ಪುತ್ರ ನಲಪಾಡ್, ಮನ್ಸೂರ್ ಖಾನ್ ಹೆಸರು ಚರ್ಚೆಯಲ್ಲಿತ್ತಾದರೂ ಅಂತಿಮವಾಗಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಬದಲು ಬೇರೆ ಸಮುದಾಯಕ್ಕೆ ಅವಕಾಶ ಕೊಟ್ಟರೆ ಹೇಗೆ ಎಂಬ ನಿಲುವಿಗೆ ಬರಲಾಗಿದೆ. ಮಾ.14ರ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದು, ಅಷ್ಟರೊಳಗೆ ಈ ಮೂರ ಕ್ಷೇತ್ರಕ್ಕೂ ಹೈಕಮಾಂಡ್ ಒಪು್ಪವ ಅಭ್ಯರ್ಥಿಯನ್ನು ಅಂತಿಮಗೊಳಿಸಬೇಕಾಗಿದೆ.
ದೆಹಲಿಯಲ್ಲಿ ಸಿ.ಟಿ. ರವಿ ಮನವೊಲಿಕೆ:ಚಿಕ್ಕಮಗಳೂರು- ಉಡುಪಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಸಿ.ಟಿ. ರವಿ ಅವರನ್ನು ಬಿಜೆಪಿ ನಾಯಕರು ದೆಹಲಿಗೆ ಕರೆಸಿಕೊಂಡಿದ್ದಾರೆ. ಅವರೊಂದಿಗೆ ಸಮಾಲೋಚನೆ ನಡೆಸಿ ಅಭಿಪ್ರಾಯ ಕೇಳುವ ಕೆಲಸ ಮಾಡಿದ್ದಾರೆ. ಜತೆಗೆ ಕೆಲವು ಸಲಹೆ ನೀಡಿದ್ದಾರೆ. ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕಟೀಲ್ ಬದಲು ಹೊಸ ಹೊಸ ಹೆಸರು ಪ್ರಸ್ತಾಪವಾಗುತ್ತಿದ್ದು, ಶಾಸಕ ಭರತ್ ಶೆಟ್ಟಿ, ಕಿಶೋರ್ ಕುಮಾರ್ ಹೆಸರು ಮುನ್ನೆಲೆಗೆ ಬಂದಿದೆ. ಶೋಭಾ ಕರಂದ್ಲಾಜೆ ಅವರಿಗೆ ಚಿಕ್ಕಮಗಳೂರು- ಉಡುಪಿ ಕ್ಷೇತ್ರದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿರುವುದರಿಂದ ಅವರಿಗೆ ಬೆಂಗಳೂರು ಉತ್ತರದಿಂದ ಸ್ಪರ್ಧಿಸಲು ಅವಕಾಶ ನೀಡಿದರೆ ಹೇಗೆ ಎಂಬ ಅಭಿಪ್ರಾಯ ಸಂಗ್ರಹವೂ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಸುರ್ಜೆವಾಲ ಭೇಟಿಯಾದ ಚಂದ್ರಪ್ಪ, ಮುನಿಯಪ್ಪ:ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಪ್ಪ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿ ಮಾಡಿ ತಮ್ಮ ಸ್ಪರ್ಧೆ ಕುರಿತು ಖಚಿತತೆ ಪಡೆದುಕೊಳ್ಳುವ ಪ್ರಯತ್ನ ನಡೆಸಿದರು. ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಅವಕಾಶ ಪಡೆದುಕೊಂಡರೆ ಆಗುವ ಪರಿಣಾಮಗಳು, ಬಿಜೆಪಿ ಅಭ್ಯರ್ಥಿ ಕಣಕ್ಕಿಳಿದರೆ ಆಗುವ ಲಾಭಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ. ಸಭೆ ಬಳಿಕ ಮಾತನಾಡಿದ ಮುನಿಯಪ್ಪ, ಕೋಲಾರದಲ್ಲಿ ಪಕ್ಷ ಯಾರಿಗಾದರೂ ಟಿಕೆಟ್ ನೀಡಲಿ, ಗೆಲ್ಲಿಸಿಕೊಂಡು ಬರುವುದು ನಮ್ಮ ಜವಾಬ್ದಾರಿ. ಯಾರಿಗೆ ಟಿಕೆಟ್ ಎನ್ನುವುದು ಹೈಕಮಾಂಡ್​ಗೆ ಬಿಟ್ಟದ್ದು. ಯಾರಿಗಾದರೂ ಕೊಡಲಿ ಅಭ್ಯರ್ಥಿ ಗೆಲ್ಲಿಸುತ್ತೇವೆ ಎಂದು ಹೇಳುವ ಮೂಲಕ ತಾವು ಸ್ಪರ್ಧಾಕಾಂಕ್ಷಿಯಲ್ಲ ಎಂಬುದನ್ನು ಪರೋಕ್ಷವಾಗಿ ಸ್ಪಷ್ಟಪಡಿಸಿದರು. ಇದಕ್ಕೂ ಮುನ್ನ ಚಂದ್ರಪ್ಪ ಪ್ರತಿಕ್ರಿಯೆ ನೀಡಿ, ನಾನು ಕಾಂಗ್ರೆಸ್​ನ ನಿಷ್ಠಾವಂತ ಕಾರ್ಯಕರ್ತ. ಮೊದಲ ಪಟ್ಟಿಯಲ್ಲಿ ಯಾಕೆ ನನ್ನ ಹೆಸರನ್ನ ತಡೆ ಹಿಡಿಯಲಾಯಿತೋ ಗೊತ್ತಿಲ್ಲ. ಈ ಬಗ್ಗೆ ವರಿಷ್ಠರನ್ನ ಕೇಳಲು ಹೋಗಿಲ್ಲ. ತಾಂತ್ರಿಕ ಕಾರಣಕ್ಕೆ ತಡೆ ಹಿಡಿದಿರಬಹುದು ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 5 =
Remember me
