ರಾಯಚೂರು:ಮೂವತ್ತೊಂದು ಪ್ರಯಾಣಿಕರಿದ್ದ ರಾಜಹಂಸ ಬಸ್ ಪಲ್ಟಿಯಾಗಿದ್ದು, ಚಾಲಕ ಸಾವಿಗೀಡಾಗಿದ್ದಾರೆ. ಮಾತ್ರವಲ್ಲ, 14 ಪ್ರಯಾಣಿಕರು ಗಾಯಗೊಂಡಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಚಿಕ್ಕಹೆಸರೂರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಬಸ್​ ಚಾಲಕ ಶ್ರೀನಿವಾಸ್ (51) ಸಾವಿಗೀಡಾಗಿದ್ದಾರೆ. ಬಸ್​ನಲ್ಲಿದ್ದ 14 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈ ಬಸ್​ ನಿನ್ನೆ ತಡರಾತ್ರಿ ರಾಯಚೂರಿನಿಂದ ಬೆಳಗಾವಿಗೆ ಹೊರಟಿತ್ತು. ಚಿಕ್ಕಹೆಸರೂರು ಬಳಿ ಚಾಲಕ ಶ್ರೀನಿವಾಸ್​ಗೆ ಹೃದಯಾಘಾತವಾಗಿತ್ತು. ಪರಿಣಾಮವಾಗಿ ಬಸ್​ ಚಾಲಕನ ನಿಯಂತ್ರಣ ತಪ್ಪಿದ್ದು, ಪಕ್ಕದ ಹೊಲಕ್ಕೆ ಉರುಳಿತ್ತು. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಬಗ್ಗೆ ನಿರ್ವಾಹಕ ಗೋವಿಂದ್ ಅವರಿಂದ ಹೇಳಿಕೆ ದಾಖಲಿಸಿಕೊಂಡ ಹಟ್ಟಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಗಳು ಅವೆಲ್ಲ ಅರ್ಥವಾಗದಷ್ಟು ಚಿಕ್ಕವಳು: ಕೊಹ್ಲಿ ಆಟಕ್ಕೆ ಸಂಭ್ರಮಿಸಿ ಅನುಷ್ಕಾ ಪ್ರತಿಕ್ರಿಯಿಸಿದ್ದು ಹೀಗೆ..

ರಾಹುಲ್ ಗಾಂಧಿ ಕಾರ್ನರ್ ಮೀಟಿಂಗ್, ರಮ್ಯಾಗೇ ನೋ ಎಂಟ್ರಿ; ಕೋಪಗೊಂಡು ವಾಪಸ್​ ಹೋದ ನಟಿ

ಇಪ್ಪತ್ತಕ್ಕೂ ಹೆಚ್ಚು ವರ್ಷಗಳಿಂದ ಪ್ರತಿ ಮಂಗಳವಾರ ಕಾಡುವ ಸಮಸ್ಯೆ: ಗ್ರಾಮಸ್ಥರ ಪರವಾಗಿ ಸಚಿವರಿಗೆ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
