ಬೆಳಗಾವಿ:ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ವಾಹನ ಸವಾರರು ಎಷ್ಟೇ ಜಾಗರೂಕತೆ ವಹಿಸಿದರೂ ಸಾಲದು ಎಂಬುವುದಕ್ಕೆ ಇದೊಂದು ತಾಜಾ ಉದಾಹರಣೆ. ಮಳೆಯಿಂದಾಗಿ ಮಬ್ಬು ಕವಿದು, ದಾರಿ ಸರಿ ಕಾಣದೆ ಬಸ್​ ಪಲ್ಟಿಯಾದ ಪ್ರಕರಣವೊಂದು ನಡೆದಿದೆ.
ಬೆಳಗಾವಿಯ ಬಡಕೊಳ್ಳಿ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ಸಂಭವಿಸಿದೆ. ಬೆಳಗಾವಿಯಿಂದ ಹಿರೇಕೆರೂರಗೆ ಹೋಗುತ್ತಿದ್ದ ಸರ್ಕಾರಿ ಬಸ್ ಅಪಘಾತಕ್ಕೀಡಾಗಿದೆ.
ಬೆಳಗಾವಿ ಜಿಲ್ಲೆಯಾದ್ಯಂತ ಮಳೆ ಅಬ್ಬರಿಸುತ್ತಿದ್ದು, ಭಾರಿ ಮಳೆಯಿಂದಾಗಿ ಬಸ್​ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಬಸ್​ನಲ್ಲಿ 35 ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಆದರೆ ಬಸ್​ನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

ನಿಮ್ಮೂರಿಗೀಗ ಅವರಲ್ಲ, ಇವರೇ ಇನ್​ಸ್ಪೆಕ್ಟರ್​; 13 ಡಿವೈಎಸ್​ಪಿಗಳೂ ಟ್ರಾನ್ಸ್​ಫರ್​..

ಅನ್ಯಕೋಮಿನವರಿಂದ ಆರ್​ಎಸ್​ಎಸ್​ ಮುಖಂಡನ ಮುಖಕ್ಕೆ ಚಾಕು ಇರಿತ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × two =
Remember me
